ಸೋನಿಯಾಗೆ ಯಶಸ್ವಿ ಶಸ್ತ್ರಚಿಕಿತ್ಸೆ

7

ಸೋನಿಯಾಗೆ ಯಶಸ್ವಿ ಶಸ್ತ್ರಚಿಕಿತ್ಸೆ

Published:
Updated:
ಸೋನಿಯಾಗೆ ಯಶಸ್ವಿ ಶಸ್ತ್ರಚಿಕಿತ್ಸೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಗರ್ಭಗೊರಳಿನ ಕ್ಯಾನ್ಸರ್‌ಗಾಗಿ ಗುರುವಾರ ನ್ಯೂಯಾರ್ಕ್‌ನ  ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈಗ  ತೀವ್ರ ನಿಗಾ ಘಟಕದಲ್ಲಿರುವ ಅವರು ಚೇತರಿಸಿಕೊಂಡಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.ಭಾರತೀಯ ಮೂಲದ ಅಮೆರಿಕ ವೈದ್ಯ ದತ್ತಾತ್ರೇಯುಡು ನೋರಿ ನೇತೃತ್ವದ ವೈದ್ಯರ ತಂಡವು ಸುಮಾರು ಒಂದು ತಾಸಿನವರೆಗೆ ಶಸ್ತ್ರಚಿಕಿತ್ಸೆ ನಡೆಸಿದೆ ಎಂದು ಮೂಲಗಳು ಹೇಳಿವೆ. ಸೋನಿಯಾ ಸುಮಾರು ಒಂದು ತಿಂಗಳ ಕಾಲ ಚಿಕಿತ್ಸೆ ಪಡೆಯಬೇಕಿದ್ದು ಈ ಅವಧಿಯಲ್ಲಿ ಅವರು ಆಸ್ಪತ್ರೆಯಲ್ಲೇ ಇರುತ್ತಾರಾ ಎಂಬುದು ಸ್ಪಷ್ಟವಾಗಿಲ್ಲ. ಶಸ್ತ್ರಚಿಕಿತ್ಸೆ ನಂತರದ ಚಿಕಿತ್ಸೆಗಳಲ್ಲಿ ವಿಕಿರಣ ಚಿಕಿತ್ಸೆಯೂ ಸೇರಿದೆ.`ಡಾ .ನೋರಿ ಅವರು ಮಹಿಳೆಯರಲ್ಲಿ ಕಂಡು ಬರುವ ಕ್ಯಾನ್ಸರ್ ಚಿಕಿತ್ಸೆ ನೀಡುವವರ ಪೈಕಿ ಅತ್ಯುನ್ನತ ಸ್ಥಾನದಲ್ಲಿರುವ ವೈದ್ಯರಾಗಿದ್ದಾರೆ~ ಎಂದು ಅಮೆರಿಕದ ಸುಪ್ರಸಿದ್ಧ ಮಹಿಳಾ ನಿಯತಕಾಲಿಕೆಯೊಂದು ತನ್ನ ಇತ್ತೀಚಿನ ಸಮೀಕ್ಷೆಯಲ್ಲಿ ಹೇಳಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry