ಶುಕ್ರವಾರ, ಮೇ 7, 2021
19 °C

ಸೋನಿಯಾ ದರ್ಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ):  ಶಸ್ತ್ರಚಿಕಿತ್ಸೆಗಾಗಿ ಕಳೆದ ತಿಂಗಳು ಅಮೆರಿಕಕ್ಕೆ ತೆರಳಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ಇಲ್ಲಿ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಸಭೆಯಲ್ಲಿ ಭಾಗವಹಿಸುವ ಮೂಲಕ ಬಹಿರಂಗವಾಗಿ ಕಾಣಿಸಿಕೊಂಡರು.ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಂಬಂಧ ಸೋನಿಯಾ ನಿವಾಸದಲ್ಲಿ ಸುಮಾರು 65 ನಿಮಿಷಗಳ ಕಾಲ ಈ ಸಭೆ ನಡೆಯಿತು. ಒಟ್ಟು 90 ಅಭ್ಯರ್ಥಿಗಳ ಹೆಸರನ್ನು ಚರ್ಚಿಸಿ, 70 ಮಂದಿಯನ್ನು ಸಭೆಯಲ್ಲಿ ಅಂತಿಮಗೊಳಿಸಲಾಯಿತು.ಸಭೆಯ ಬಳಿಕ ತಮ್ಮನ್ನು ಭೇಟಿಯಾದ ಪ್ರಧಾನಿ ಮನಮೋಹನ್ ಸಿಂಗ್ ಅವರೊಂದಿಗೂ ಸೋನಿಯಾ ಸಮಾಲೋಚಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.