ಸೋನಿಯಾ ಭೇಟಿ ಮುಂದೂಡಿಕೆ

7

ಸೋನಿಯಾ ಭೇಟಿ ಮುಂದೂಡಿಕೆ

Published:
Updated:

ಬೆಂಗಳೂರು:ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಮಂಡ್ಯ ಭೇಟಿ ಕಾರ್ಯಕ್ರಮವನ್ನು ಮುಂದೂ ಡಲಾಗಿದೆ. ಇದೇ 30ರ ಬದಲಿಗೆ ಅಕ್ಟೋಬರ್‌ 3 ಅಥವಾ 4ಕ್ಕೆ ಅವರು ಮಂಡ್ಯಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ.ನಗರದ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ನಡೆದ ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್‌ ಕಾರ್ಯ ಕಾರಿಣಿ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌, ‘ವಿಧಾನಸಭಾ ಚುನಾವಣೆ ಮತ್ತು ನಂತರ ನಡೆದ ಉಪ ಚುನಾವಣೆ ಗಳಲ್ಲಿ ಪಕ್ಷವನ್ನು ಬೆಂಬಲಿಸಿದ ಮತದಾರರಿಗೆ ಅಭಿನಂದನೆ ಸಲ್ಲಿಸಲು ಮಂಡ್ಯದಲ್ಲಿ ಇದೇ 30ರಂದು ಸಮಾ ವೇಶ ನಡೆಸಲು ನಿರ್ಧರಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸೋನಿಯಾ ಅವರು ಪಾಲ್ಗೊಳ್ಳುತ್ತಾರೆ. ಕೆಲ ಕಾರಣಗಳಿಂದ ಸಮಾವೇಶವನ್ನು ಮುಂದೂಡಲಾಗಿದೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry