ಕೊಪ್ಪಳ: ಚುನಾವಣಾ ನೀತಿ ಸಂಹಿತಿ ಉಲ್ಲಂಘನೆ ಕಾರಣ ಸಚಿವ ಸೋಮಣ್ಣ ಬೆಂಗಾವಲಿಗೆ ಬಳಸುತ್ತಿದ್ದ ಕೆಂಪು ದೀಪ ಅಳವಡಿಸಿದ್ದ ವಾಹನವನ್ನು ಗುರುವಾರ ಪ್ರಾದೇಶಿಕ ಸಾರಿಗೆ ಅಧಿಕಾರಿ ಜಪ್ತಿ ಮಾಡಿದ್ದಾರೆ.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಸಿ.ಎಸ್.ಸುರಂಜನ್ ಈ ವಿಷಯ ತಿಳಿಸಿದರು.

ವಾಹನವನ್ನು ಜಪ್ತಿ ಸಂಬಂಧ ಸಚಿವ ಸೋಮಣ್ಣಗೆ ಶೀಘ್ರವೇ ನೊಟೀಸ್ ಜಾರಿ ಮಾಡಲಾಗುವುದು ಎಂದು ಅವರು ಹೇಳಿದರು.

ಅಮಾನತು: ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಹಾಗೂ ರಾಜ್ಯ ಉಪಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿ ತುಳಸಿ ಮದ್ದಿನೇನಿ ಆದೇಶ ಹೊರಡಿಸಿದ್ದಾರೆ.

ತಾಲ್ಲೂಕಿನ ಹಲಗೇರಿ ಗ್ರಾಮದಲ್ಲಿ ಸೆ. 20ರಂದು ಶಂಭುಲಿಂಗನಗೌಡ ತಮ್ಮ ಮನೆಯಲ್ಲಿ ಶಿಕ್ಷಕರ ಸಭೆ ನಡೆಸಿದ್ದರು. ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಉಪಸ್ಥಿತರಿದ್ದರು. ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಕರ್ತವ್ಯಲೋಪ ಎಸಗಿರುವ ಹಿನ್ನೆಲೆಯಲ್ಲಿ ಶಂಭುಲಿಂಗನಗೌಡರನ್ನು ಅಮಾನತುಗೊಳಿಸಿದ್ದಾಗಿ ಆದೇಶದಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.