ಶನಿವಾರ, ಮೇ 21, 2022
26 °C

ಸೋಮಣ್ಣ ಮೇಲೆ ಹಲ್ಲೆ: ಆರೋಪಿ ಪೊಲೀಸ್ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಚಿವ ವಿ.ಸೋಮಣ್ಣ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಆರೋಪಿ ಬಿ.ಎಸ್.ಪ್ರಸಾದ್‌ನನ್ನು ನ್ಯಾಯಾಲಯ ಮೂರು ದಿನಗಳ ಕಾಲ ವಿಧಾನಸೌಧ ಠಾಣೆ ಪೊಲೀಸರ ವಶಕ್ಕೆ ಒಪ್ಪಿಸಿದೆ.ಶನಿವಾರ ಬೆಳಿಗ್ಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿ ಸೋಮಣ್ಣ ಅವರ ಮೇಲೆ ಆರೋಪಿ ಚಪ್ಪಲಿಯಿಂದ ಹಲ್ಲೆ ನಡೆಸಿದ್ದ. ಈ ಹಿನ್ನೆಲೆಯಲ್ಲಿ ವಿಧಾನಸೌಧ ಠಾಣೆ ಪೊಲೀಸರು ಪ್ರಸಾದ್‌ನನ್ನು ಬಂಧಿಸಿದ್ದರು.ಭಾನುವಾರ ಬೆಳಿಗ್ಗೆ ನಗರದ ಎಂಟನೇ ಎಸಿಎಂಎಂ ನ್ಯಾಯಾಲಯಕ್ಕೆ ಪೊಲೀಸರು  ಆರೋಪಿಯನ್ನು ಹಾಜರುಪಡಿಸಿದ್ದು, ಬುಧವಾರದವರೆಗೆ ಪೊಲೀಸ್ ವಶಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.