ಬುಧವಾರ, ಜೂನ್ 23, 2021
24 °C

ಸೋಮಣ್ಣ ವಿರುದ್ಧ ಖಾಸಗಿ ದೂರು:21ರವರೆಗೆ ಗಡುವು ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಸತಿ ಸಚಿವ ವಿ.ಸೋಮಣ್ಣ, ಅವರ ಪತ್ನಿ ಶೈಲಜಾ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತಿತರರ ವಿರುದ್ಧ ರವಿಕೃಷ್ಣಾ ರೆಡ್ಡಿ ಸಲ್ಲಿಸಿರುವ ಖಾಸಗಿ ದೂರಿನಲ್ಲಿರುವ ಆರೋಪಗಳ ಬಗ್ಗೆ ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ನೀಡಿದ್ದ ಗಡುವನ್ನು ಇದೇ 21ರವರೆಗೆ ವಿಸ್ತರಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ.



ನಾಗದೇವನಹಳ್ಳಿ ಗ್ರಾಮದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸ್ವಾಧೀನಪಡಿಸಿಕೊಂಡಿದ್ದ 22 ಗುಂಟೆ ಭೂಮಿಯನ್ನು ಕಾನೂನುಬಾಹಿರವಾಗಿ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿರುವ ಆರೋಪದ ಮೇಲೆ ರವಿಕೃಷ್ಣಾ ದೂರು ಸಲ್ಲಿಸಿದ್ದರು. ಈ ಬಗ್ಗೆ ತನಿಖೆ ನಡೆಸುವಂತೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ (ಲೋಕಾಯುಕ್ತ) ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿತ್ತು. ನ್ಯಾಯಾಲಯ ಈ ಹಿಂದೆ ನೀಡಿದ್ದ ಗಡುವಿನ ಪ್ರಕಾರ ತನಿಖಾಧಿಕಾರಿ ಶನಿವಾರ ಅಂತಿಮ ವರದಿ ಸಲ್ಲಿಸಬೇಕಿತ್ತು.



ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು ಶನಿವಾರ ಪ್ರಕರಣದ ವಿಚಾರಣೆ ನಡೆಸಿದರು. ಅಂತಿಮ ವರದಿ ಸಲ್ಲಿಸಲು ಇದೇ 21ರವರೆಗೆ ಕಾಲಾವಕಾಶ ನೀಡುವಂತೆ ಈ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ಮನವಿ ಮಾಡಿದರು. ಅದನ್ನು ಮಾನ್ಯ ಮಾಡಿದ ನ್ಯಾಯಾಧೀಶರು, ಗಡುವು ವಿಸ್ತರಿಸಿ ಆದೇಶ ಹೊರಡಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.