ಸೋಮನಮರಡಿ: ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ

ಗುರುವಾರ , ಮೇ 23, 2019
24 °C

ಫಲಿತಾಂಶ (ಮುನ್ನಡೆ+ಗೆಲುವು) 0/542

ಸೋಮನಮರಡಿ: ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ

Published:
Updated:

ಜಾಲಹಳ್ಳಿ: ಇಲ್ಲಿಗೆ ಸಮೀಪದ ಸೋಮನಮರಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಗನ್ನಾಥರಾಯ ಪಾಟೀಲ್ ಮಾತನಾಡಿ, ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ  ಸೈಕಲ್ ವಿತರಣೆ ಮಾಡುವ ಕಾರ್ಯಕ್ರಮ ಜಾರಿಗೆ ತಂದಿರುವುದು ಶಿಕ್ಷಣ ಇಲಾಖೆಯ ಪ್ರತಷ್ಠಿತ ಕಾರ್ಯಕ್ರಮವಾಗಿದ್ದು ಇದರಿಂದಾಗಿ ಅನೇಕ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಅದರಲ್ಲೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಈ ಯೋಜನೆಯಿಂದಾಗಿ ತುಂಬಾ ಅನುಕೂಲವಾಗಿದೆ ಎಂದು ತಿಳಿಸಿದರು.  ಸರ್ಕಾರಗಳು ವಿದ್ಯಾರ್ಥಿಗಳಿಗಾಗಿ  ರೀತಿಯ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳ ಸದುಪಯೋಗ ಪಡೆದುಕೊಳ್ಳುವ ಮೂಲಕ ಪ್ರತಿಯೊಬ್ಬರೂ ಶಿಕ್ಷಣ ಪಡೆಯುವಂತಾಗಬೇಕೆಂದು ಹೇಳಿದರು.ಗ್ರಾ.ಪಂ ಅಧ್ಯಕ್ಷೆ ನೀಲಮ್ಮ, ಉಪಾಧ್ಯಕ್ಷ ಬಸವರಾಜ ಸ್ವಾಮಿ, ಸದಸ್ಯ ಬಸವರಾಜ, ಮುಖಂಡರಾದ ಚಂದ್ರಶೇಖರ ನಾಡಗೌಡ, ಶಿವರಾಜ ಸಿದ್ದಾಪುರ,  ಹನುಮನಗೌಡ ಪೋ.ಪಾ., ಎನ್. ಲಿಂಗಪ್ಪ ಹಾಗೂ ಶಾಲೆಯ ಮುಖ್ಯೋಪಧ್ಯಾಯರಾದ ವಿಠೋಬ ನಾಯಕ ಇದ್ದರು. ಹನುಮಂತ ಕಾಂತಿ, ಈರಪ್ಪ ಕಾರ್ಯಕ್ರಮ ನಿರ್ವಹಿಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry