ಸೋಮಶೇಖರ್ ವರದಿ ತಿರಸ್ಕರಿಸಿದ್ದೇನೆ
ಬೆಂಗಳೂರು: ‘ರಾಜ್ಯದ ವಿವಿಧೆಡೆ ನಡೆದ ಚರ್ಚ್ ದಾಳಿಗೆ ಸಂಬಂಧಿಸಿದಂತೆ ನ್ಯಾ.ಬಿ.ಕೆ.ಸೋಮಶೇಖರ್ ಅವರು ನೀಡಿದ ತನಿಖಾ ವರದಿಯನ್ನು ಎಂದೋ ತಿರಸ್ಕರಿಸಿದ್ದೇನೆ’ ಎಂದು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಖಾಸಗಿ ಕಾರ್ಯಕ್ರಮದಲ್ಲಿ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ‘ಕರ್ನಾಟಕ ಯಾವಾಗಲೂ ಧಾರ್ಮಿಕ ಸಹಿಷ್ಣುತೆಗೆ ಪ್ರಸಿದ್ಧಿಯಾಗಿದೆ. ಈ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಚರ್ಚ್ಗಳ ಮೇಲೆ ನಡೆಸಿದ ದಾಳಿಯನ್ನು ಒಪ್ಪುವಂಥದಲ್ಲ. ಈ ಬಗ್ಗೆ ಮಾಧ್ಯಮಗಳು ತಮ್ಮ ಪಾತ್ರ ನಿರ್ವಹಿಸಬೇಕು’ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.