ಮಂಗಳವಾರ, ಜೂನ್ 15, 2021
22 °C

ಸೋಮಶೇಖರ ರೆಡ್ಡಿ ಬೇಸರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿಯಲ್ಲಿನ ಬೆಳವಣಿಗೆಗಳಿಂದ ತೀವ್ರ ಬೇಸರ ಉಂಟಾಗಿದ್ದು, ಈ ಸಂದರ್ಭದಲ್ಲಿ ಶಾಸಕನಾಗಿ ಆಯ್ಕೆಯಾಗಿದ್ದಕ್ಕೇ ವ್ಯಥೆ ಪಡುವಂತಾಗಿದೆ ಎಂದು ಶಾಸಕ ಜಿ.ಸೋಮಶೇಖರರೆಡ್ಡಿ ವಿಷಾದ ವ್ಯಕ್ತಪಡಿಸಿದರು.ತಾಲ್ಲೂಕಿನ ಸಂಗನಕಲ್ಲು ಗ್ರಾಮದ ಬಳಿ ಮಂಗಳವಾರ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `2008ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅನಿಲ್ ಲಾಡ್ ವಿರುದ್ಧ ಕೇವಲ 1022 ಮತಗಳ ಅಂತರದಿಂದ ಜಯಿಸಿರುವ ನಾನು, ಸೋತಿದ್ದರೇ ಚೆನ್ನಾಗಿತ್ತು ಎನ್ನಿಸುತ್ತಿದೆ~ ಎಂದು ಹೇಳಿದರು.ಶಾಸಕರಲ್ಲಿ ಒಗ್ಗಟ್ಟಿಲ್ಲ, ಬಿಜೆಪಿ ಹೈಕಮಾಂಡ್‌ಗೆ ಪಕ್ಷದ ರಾಜ್ಯ ಮುಖಂಡರ ಮೇಲೆ ಹಿಡಿತವಿಲ್ಲ ಎಂದರು. ಶಾಸಕ, ಸೋದರ ಜಿ.ಕರುಣಾಕರ ರೆಡ್ಡಿ ಅವರು ಯಡಿಯೂರಪ್ಪ ಅವರ ಗುಂಪಿನಲ್ಲಿ ಸೇರ್ಪಡೆ ಆಗಿರುವುದರ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಲು ನಿರಾಕರಿಸಿದರು. ತಾವು ಯಡಿಯೂರಪ್ಪ ಹಾಗೂ ಡಿ.ವಿ. ಸದಾನಂದಗೌಡ ಅವರಲ್ಲಿ ಯಾರ ಪರವೂ ಇಲ್ಲ. ಮತ ನೀಡಿ ಆಯ್ಕೆ ಮಾಡಿರುವ ಜನರ ಪರ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.