ಬುಧವಾರ, ಜೂನ್ 16, 2021
23 °C

ಸೋರಹುಣಸೆ ಶಾಲೆಗೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಹದೇವಪುರ: ನಗರ ಜಿಲ್ಲೆ ವ್ಯಾಪ್ತಿಯಲ್ಲಿ 2011-12ನೇ ಸಾಲಿನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ಕ್ಷೇತ್ರದ ಸೋರಹುಣಸೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಉತ್ತಮ ಶಾಲೆ ಎಂದು ಗುರುತಿಸಿ ಡಯಟ್ ಪ್ರಶಸ್ತಿ ನೀಡಿ ಗೌರವಿಸಿದೆ.ನಗರ ಜಿಲ್ಲಾ ಪಂಚಾಯತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಜಂಟಿಯಾಗಿ ಈ ಪ್ರಶಸ್ತಿಯನ್ನು ನೀಡಿದ್ದು, ಬೆಂಗಳೂರು ದಕ್ಷಿಣ ವಲಯ-4ರಲ್ಲಿನ ಎಲ್ಲಾ ಶಾಲೆಗಳ ಪೈಕಿ ಸೋರಹುಣಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಶಸ್ತಿಗೆ ಆಯ್ಕೆಗೊಂಡಿದೆ.ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿ.ಟಿ.ಬಿ. ಮುನಿಸ್ವಾಮಿರೆಡ್ಡಿ, `ಶಾಲೆಯ ಎಲ್ಲಾ ಮಕ್ಕಳಿಂದ ಹಾಗೂ ಶಿಕ್ಷಕ ವೃಂದದವರ ಸತತ ಪರಿಶ್ರಮದಿಂದ ಈ ಡಯಟ್ ಪ್ರಶಸ್ತಿ ಲಭಿಸಿದೆ. ಗ್ರಾಮಕ್ಕೆ ದೊಡ್ಡ ಹೆಸರು ಬಂದಂತಾಗಿದೆ~ ಎಂದರು.ಇದರಿಂದಾಗಿ ಮಕ್ಕಳು ಇನ್ನಷ್ಟು ಉತ್ಸಾಹದಿಂದ ಕಲಿಕೆಯಲ್ಲಿ ತೊಡಗುವಂತಾಗಿದೆ. ಶಿಕ್ಷಕರ ಮೇಲೆ ಜವಾಬ್ದಾರಿ ಹೆಚ್ಚಾಗಿದೆ ಎಂದ ಅವರು ತಮ್ಮ ಶಾಲೆಯ ಮಕ್ಕಳು ಕ್ರೀಡೆಯಲ್ಲಿಯೂ ಸಹ ಸಾಕಷ್ಟು ಮುಂದೆ ಇದ್ದಾರೆ. ಪ್ರಸಕ್ತ ವರ್ಷ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಅನೇಕ ಬಹುಮಾನಗಳನ್ನು ಪಡೆದಿದ್ದಾರೆ ಎಂದು ಅವರು ಹೆಮ್ಮೆಯಿಂದ ಹೇಳಿದರು.ಈ ಸಂದರ್ಭದಲ್ಲಿ ಉಪ ನಿರ್ದೇಶಕರಾದ ಸಿ.ನಾಗರಾಜನ್, ಮುಖ್ಯಾಧ್ಯಾಪಕರಾದ ಬಿ.ಎಂ.ರಾಮಪ್ಪ, ತಿರುಮಲರಾವ್, ಹರಿಪ್ರಸಾದ್, ದೈಹಿಕ ಶಿಕ್ಷಕ ವಿ.ನಂಜುಂಡಪ್ಪ, ಸಿ.ಆರ್.ಗೋವಿಂದಪ್ಪ ಉಪಸ್ಥಿತರಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.