ಸೋಮವಾರ, ಜನವರಿ 27, 2020
17 °C

ಸೌಕರ್ಯಕ್ಕೆ ಆಗ್ರಹ: ವಿದ್ಯಾರ್ಥಿಗಳ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗುಲ್ಬರ್ಗ ವಿಶ್ವವಿದ್ಯಾನಿಲಯದ ಕೃಷ್ಣ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ದಲಿತ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿ ಒಕ್ಕೂಟದ  ನೇತೃತ್ವದಲ್ಲಿ ಈಚೆಗೆ ಪ್ರತಿಭಟನೆ ನಡೆಸಿದರು.ವಿದ್ಯಾರ್ಥಿ ನಿಲಯದ ಕೋಣೆಗಳಲ್ಲಿ­ರುವ ವಿದ್ಯುತ್ ದೀಪ ಮತ್ತು ಫ್ಯಾನ್‌ಗಳನ್ನು ಸರಿಪಡಿಸಬೇಕು. ಗುಣ­ಮಟ್ಟದ ತರಕಾರಿ ಬಳಸಿ ಆಹಾರ ತಯಾರಿಸಬೇಕು. ಸ್ವಚ್ಛತೆ ಕಾಪಾಡ­ಬೇಕು. ಮುಖ್ಯವಾಗಿ ಕುಡಿಯುವ ನೀರು ಪೂರೈಕೆ ಮಾಡಲು ತುರ್ತು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಕ್ರಿಯಿಸಿ (+)