ಗುರುವಾರ , ಜೂನ್ 24, 2021
24 °C

ಸೌಕರ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಜಿಲ್ಲೆಯಲ್ಲಿ ವಾಸಿಸುತ್ತಿರುವ ದಲಿತ ಕುಟುಂಬಗಳಿಗೆ ಮೂಲ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ,  ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಎದುರು ಗುರುವಾರ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ಪದಾಧಿಕಾರಿಗಳು ಮೌನ ಪ್ರತಿಭಟನೆ ನಡೆಸಿದರು.ಜಿಲ್ಲೆಯ ಪ್ರತಿ ದಲಿತ ಕಾಲೊನಿಗಳಿಗೆ ಸಿಮೆಂಟ್‌ ರೋಡ್‌ ನಿರ್ಮಾಣ ಆಗಬೇಕು. ದಲಿತರ ಉಪಯೋಗಕ್ಕೆ ಸಿಮೀತವಾದಂತೆ ಸಮುದಾಯ ಭವನ ನಿರ್ಮಾಣ ಮಾಡಲು ಜಾಗ ನೀಡುವಂತೆ ಅವರು ಒತ್ತಾಯಿಸಿದರು.ಅರಣ್ಯ ಹಕ್ಕು ಕಾಯಿದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯ ಪೈಸಾರಿ, ದೇವರಕಾಡು, ಕಂದಾಯ ಭೂಮಿ ಸೇರಿದಂತೆ ಇನ್ನಿತರೆ ಸರ್ಕಾರಿ ಜಮೀನಿನಲ್ಲಿ ವಾಸಿಸುತ್ತಿರುವ ದಲಿತ ಕುಟುಂಬಗಳನ್ನು ಒಕ್ಕಲೆಬ್ಬಿಸದಂತೆ ಕ್ರಮ ಗೆದುಕೊಳ್ಳಬೇಕೆಂದು ಆಗ್ರಹಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎಚ್‌. ಪ್ರಸನ್ನ ಅವರಿಗೆ ಮನವಿ ಪತ್ರ ಸಲ್ಲಿಸಿದರು.ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಟಿ.ಎನ್‌. ಗೋವಿಂದಪ್ಪ, ಜಿಲ್ಲಾ ಸಂಚಾಲಕ ಕೃಷ್ಣಪ್ಪ, ಸಂಘಟನಾ ಕಾರ್ಯದರ್ಶಿ ಎಚ್‌.ಆರ್‌. ಪರಶುರಾಮ್‌, ಪ್ರಮುಖರಾದ ರಜನಿಕಾಂತ್‌, ಮಹದೇವು, ಮೇರಿ, ನಿರ್ಮಲ  ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.