ಶುಕ್ರವಾರ, ಜೂನ್ 5, 2020
27 °C

ಸೌಲಭ್ಯ ಒದಗಿಸಲು ಸ್ವಸಹಾಯ ಸಂಘ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೂಡಿಗೆರೆ: ಸ್ತ್ರೀಶಕ್ತಿ ಸಂಘಗಳಿಗೆ ನೀಡುತ್ತಿರುವಂತೆಯೇ ಸಹಾಯಧನ ಸೇರಿದಂತೆ ವಿವಿಧ ಸೌಲಭ್ಯಗಳನ್ನು ತಮಗೂ ನೀಡಬೇಕು ಎಂದು ಆಗ್ರಹಿಸಿ ಗೋಣಿಬೀಡಿನ ವಿವಿಧೋದ್ದೇಶ ಸಮಾಜ ಸೇವಾ ಸಂಸ್ಥೆ ಮತ್ತು ಇಂಚರ ಒಕ್ಕೂಟ ಆಶ್ರಯದಲ್ಲಿ ತಾಲ್ಲೂಕಿನ ವಿವಿಧ ಸ್ವಸಹಾಯ ಸಂಘಗಳ ಸದಸ್ಯೆಯರು ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.ಜಿಲ್ಲೆಯ 825 ಮಹಿಳಾ ಸ್ವಸಹಾಯ ಸಂಘಗಳಲ್ಲಿ 13,265 ಬಡ ಮಹಿಳೆಯರು ಸ್ವಸಹಾಯ ಸಂಘ ಸ್ಥಾಪಿಸಿ, ಅಭಿವೃದ್ಧಿ ಚಟುವಟಿಕೆ ನಡೆಸುತ್ತಿದ್ದಾರೆ. ಸರ್ಕಾರ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ ಮಾತ್ರ ಸಬ್ಸಿಡಿ ಸೌಲಭ್ಯದ ಸಾಲ, ಸುತ್ತುನಿಧಿ ನೀಡುತ್ತಿದ್ದು, ಇತರೆ ಸಂಘಗಳತ್ತ ತಾರತಮ್ಯ ತೋರುತ್ತಿದೆ. ಎಂದು ಪ್ರತಿಭಟನಾಕಾರರು ದೂರಿದರು.ಪ್ರವಾಸಿ ಮಂದಿರದಿಂದ ಮೆರವಣಿಗೆ ಹೊರಟ ಮಹಿಳಾ ಮತ್ತು ಸ್ವಸಹಾಯ ಸಂಘಗಳ ಸದಸ್ಯರು ಶಿರಸ್ತೆದಾರ್ ಅಂಜನಪ್ಪ ಅವರಿಗೆ ಮನವಿಪತ್ರ ಸಲ್ಲಿಸಿದರು. ಚಿಕ್ಕಮಗಳೂರು ವಿವಿಧೋದ್ದೇಶ ಸಮಾಜಸೇವಾ ಸಂಘ ಗೋಣಿಬೀಡು ಸಂಚಾಲಕಿ ಸಿಸ್ಟರ್ ಶೋಭಾ, ಇಂಚರ ಒಕ್ಕೂಟದ ಜೈನಬಿ, ರತ್ನ ಇತರರು ಪ್ರತಿಭಟನೆಯಲ್ಲಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.