ಸೌಲಭ್ಯ, ಪ್ರೋತ್ಸಾಹಧನ: ಸ್ಪಷ್ಟನೆಗೆ ಒತ್ತಾಯ

7

ಸೌಲಭ್ಯ, ಪ್ರೋತ್ಸಾಹಧನ: ಸ್ಪಷ್ಟನೆಗೆ ಒತ್ತಾಯ

Published:
Updated:

ದಾವಣಗೆರೆ: ಆಶಾ ಕಾರ್ಯಕರ್ತೆಯರಿಗೆ ನೀಡುವ ಸೌಲಭ್ಯ, ಪ್ರೋತ್ಸಾಹಧನದ ಬಗ್ಗೆ ಸ್ಪಷ್ಟೀಕರಣ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಮಂಗಳವಾರ ಡಿಎಚ್‌ಒ ಡಾ.ಬಿ.ಆರ್. ಸುಮಿತ್ರಾದೇವಿ ಅವರಿಗೆ ಮನವಿ ಸಲ್ಲಿಸಿತು.ಅಲ್ಲದೇ, ಹೆಚ್ಚುವರಿ ಮಾರ್ಗಸೂಚಿಗಳ ಕುರಿತು ಸರ್ಕಾರದಿಂದ ಬಂದಿರುವ ಆದೇಶಗಳನ್ನು ಜಿಲ್ಲೆಯಲ್ಲಿ ಶೀಘ್ರವಾಗಿ ಜಾರಿ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದೆ. ಸ್ಪಂದಿಸಿದ ಅಧಿಕಾರಿಗಳು ಶೀಘ್ರವೇ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ, ಜಿಲ್ಲಾಧ್ಯಕ್ಷ ರಾಘವೇಂದ್ರ ನಾಯ್ಕ, ವಿವಿಧ ತಾಲ್ಲೂಕಿನ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry