ಭಾನುವಾರ, ಜನವರಿ 19, 2020
26 °C

ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ ರಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ತಾಪುರ: ತಾಲ್ಲೂಕಿನ ರಾವೂರು ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯಸ್ಥರ ಮಾರ್ಗದರ್ಶನದಲ್ಲಿ, ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ವಿದ್ಯಾರ್ಥಿಗಳ ಸ್ಕೌಟ್ಸ್ ಮತ್ತು ಗೈಡ್ಸ್ ಸಂಘಟನೆ ಘಟಕ ಈಚೆಗೆ ರಚನೆ ಮಾಡಲಾಯಿತು.ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ ರಚನೆಗೆ ಶಾಲೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವಿಂದ್ರ ತಳವಾರ ಅಧ್ಯಕ್ಷತೆ ವಹಿಸಿದ್ದರು. ಸಂಘಟನೆಯ ಜಿಲ್ಲಾ ಮುಖ್ಯಸ್ಥರಾದ ವೀರಭದ್ರಯ್ಯಾ, ಗ್ರಾಮ ಪಂಚಾಯಿತಿ ಸದಸ್ಯ ಜಾವೇದ್‌ಮಿಯ್ಯಾ, ಶಾಲೆಯ ಸಹ ಶಿಕ್ಷಕ ಬಾಬು, ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕದ ಅಧ್ಯಕ್ಷ ರಾಘವೇಂದ್ರ ಹೂಗಾರ ಮುಖ್ಯ ಅತಿಥಿಗಳಾಗಿದ್ದರು.ಸ್ಕೌಟ್ಸ್ ಮತ್ತು ಗೈಡ್ಸ್ ಬಗ್ಗೆ ವಿರುಪಾಕ್ಷಯ್ಯ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಿದರು. ಸಮಗ್ರ ಚರ್ಚೆಯ ನಂತರ ವಿದ್ಯಾರ್ಥಿ ಸಂಘಟನೆ ರಚನೆ ಮಾಡಲಾಯಿತು. ಸಹ ಶಿಕ್ಷಕಿ ಶಿವಲೀಲಾ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಅನ್ನಪೂರ್ಣ ಹಾಗೂ ಸಿಬ್ಬಂದಿ, ಶಾಲಾ ವಿದ್ಯಾರ್ಥಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

 

ಪ್ರತಿಕ್ರಿಯಿಸಿ (+)