ಬುಧವಾರ, ಮೇ 12, 2021
18 °C

ಸ್ಕ್ಯಾನಿಂಗ್ ಯಂತ್ರವಿಲ್ಲದ ಸರ್ಕಾರಿ ಆಸ್ಪತ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಣಿಗಲ್: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಇಲ್ಲದ ಕಾರಣ ಗ್ರಾಮೀಣ ಪ್ರದೇಶ ಜನರು ಪರದಾಡುವಂತಾಗಿದೆ.ಚಿಕಿತ್ಸೆಗೆ ಬರುವ ರೋಗಿಗಳ ಪೈಕಿ ಗರ್ಭಿಣಿಯರು ಮತ್ತು ದೀರ್ಘ ಅನಾರೋಗ್ಯ ಪೀಡಿತರಿಗೆ ವೈದ್ಯರು ಸ್ಕ್ಯಾನಿಂಗ್‌ನ ಸಲಹೆಯನ್ನು ನೀಡುವ ಪರಿಪಾಠ ಬೆಳೆದು ಬಂದಿದೆ.ಗ್ರಾಮೀಣ ಪ್ರದೇಶದ ಜನತೆಯ ಆರೋಗ್ಯ ಸುಧಾರಣೆಗಾಗಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡುವ ಸರ್ಕಾರ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಸ್ಕ್ಯಾನಿಂಗ್ ಯಂತ್ರೋಪಕರಣ ಸರಬರಾಜು ಮಾಡಿಲ್ಲ. ಹೀಗಾಗಿ ರೋಗಿಗಳು ಖಾಸಗಿ ನರ್ಸಿಂಗ್ ಹೋಂನಲ್ಲಿ ಹಣ ತೆತ್ತು ಸ್ಕ್ಯಾನಿಂಗ್ ಮಾಡಿಸಬೇಕಾಗಿದೆ.ಸರ್ಕಾರಿ ಆಸ್ಪತ್ರೆ ಸ್ಕ್ಯಾನಿಂಗ್ ವೈದ್ಯರು ಸಹ ಖಾಸಗಿಯಾಗಿ ಸ್ಕ್ಯಾನಿಂಗ್ ಸೆಂಟರ್ ಪ್ರಾರಂಭಿಸಿದ್ದು, ತಮ್ಮ ಕೇಂದ್ರಕ್ಕೆ ಗ್ರಾಹಕರು ದೊರೆಯಲಿ ಎಂಬ ಕಾರಣಕ್ಕೆ ಸರ್ಕಾರಿ ಆಸ್ಪತ್ರೆಗೆ ಸ್ಕ್ಯಾನಿಂಗ್ ಯಂತ್ರ ಸರಬರಾಜು ಮಾಡದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಸಾರ್ವಜನಿಕರು ಆಪಾದಿಸಿದ್ದಾರೆ.ಸರ್ಕಾರಿ ಆಸ್ಪತ್ರೆಯಲ್ಲಿ ನೂರು ರೂಪಾಯಿಗಳಿಗೆ ದೊರೆಯುವ ಸೌಲಭ್ಯಕ್ಕೆ ಖಾಸಗಿಯಲ್ಲಿ 300ರಿಂದ 500 ತೆತ್ತು ಪಡೆಯುವಂತಾಗಿದೆ ಎಂದು ರತ್ನಮ್ಮ, ಯಶೋದಮ್ಮ, ಜಯಲಕ್ಷ್ಮಿ, ಸತೀಶ, ಶಂಕರಪ್ಪ, ಸೀನಪ್ಪ ಆರೋಪಿಸಿದ್ದಾರೆ.ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಡಾ.ಬಿ.ಎನ್.ರವಿ ಅವರು ಗಮನಹರಿಸಿ ಅಗತ್ಯವಿರುವ ಕಡೆ ಸ್ಕ್ಯಾನಿಂಗ್ ಯಂತ್ರ ಹಾಗೂ ವೈದ್ಯರ ನೇಮಕಾತಿಗೆ ಕ್ರಮಕೈಗೊಳ್ಳಬೇಕೆಂದು ಪುರಸಭೆ ಮಾಜಿ ಅಧ್ಯಕ್ಷ ಕೆ.ಎಲ್.ಹರೀಶ್, ಶ್ರೀನಿವಾಸ್, ಗೋವಿಂದರಾಜು  ಮನವಿ ಮಾಡಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.