ಶುಕ್ರವಾರ, ನವೆಂಬರ್ 22, 2019
23 °C

ಸ್ತ್ರೀರೋಗ ತಪಾಸಣೆ

Published:
Updated:

ಶೃಂಗೇರಿ: ಜೆಸಿಬಿಎಂ ಕಾಲೇಜಿನಲ್ಲಿ ತೀರ್ಥಹಳ್ಳಿಯ ಸಾರ್ವಜನಿಕ ಆಸ್ಪತ್ರೆ ಮತ್ತು ಬೆಂಗಳೂರಿನ ಸೆಂಟ್ ಜಾನ್ಸ್ ಮೆಡಿಕಲ್ ಕಾಲೇಜು ವತಿಯಿಂದ ಶುಕ್ರವಾರ  ಕ್ಯಾನ್ಸರ್ ಮತ್ತು ಸ್ತ್ರೀರೋಗಗಳ ಉಚಿತ ತಪಾಸಣೆ ಮತ್ತು ಮಾಹಿತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ನೇತೃತ್ವದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸ್ತ್ರೀರೋಗ ತಜ್ಞೆ ಡಾ.ಸುಮಾ ಉಚಿತ ತಪಾಸಣೆ ಮತ್ತು ಸಲಹೆ ನೀಡಲಿದ್ದಾರೆ.ತಪಾಸಣಾ ಕಾರ್ಯಕ್ಕಾಗಿ ಆಧುನಿಕ ತಂತ್ರಜ್ಞಾನದ ಯಂತ್ರೋಪಕರಣಗಳನ್ನು ಬಳಸಲಾಗುತ್ತಿದ್ದು, ಸಾರ್ವಜನಿಕರು ಈ ಸೌಲಭ್ಯವನ್ನು ಪಡೆದುಕೊಳ್ಳಬೇಕೆಂದು ಆಯೋಜಕರು ವಿನಂತಿಸಿದ್ದಾರೆ.

ಪ್ರತಿಕ್ರಿಯಿಸಿ (+)