ಶನಿವಾರ, ಮೇ 15, 2021
22 °C

ಸ್ಥಗಿತಗೊಂಡ ರಸ್ತೆ ಕಾಮಗಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: ತಾಲ್ಲೂಕಿನ ಸಮೇತನಹಳ್ಳಿ ಕೆರೆಕಟ್ಟೆಯಿಂದ ದಾಮೋದರನಗರ ವರೆಗಿನ ಒಂದು ಕಿ.ಮಿ.ರಸ್ತೆ ಕಾಮಗಾರಿ ಮೂರು ತಿಂಗಳಿಂದ ಸ್ಥಗಿತಗೊಂಡಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ.ರಸ್ತೆಗೆ ಜಲ್ಲಿಕಲ್ಲು ಹಾಕಿ ಡಾಂಬರೀಕರಣ ಮಾಡದೆ ಬಿಟ್ಟಿರುವುದರಿಂದ ವಾಹನ ಸವಾರರಿಗೆ ಸಮಸ್ಯೆಯಾಗಿದೆ. ಸೈಕಲ್, ದ್ವಿಚಕ್ರವಾಹನಗಳ ಸವಾರರು ಸರ್ಕಸ್ ಮಾಡಿಕೊಂಡು ಹರಡಿರುವ ಜಲ್ಲಿಕಲ್ಲುಗಳ ಮೇಲೆ ಸಂಚರಿಸಬೇಕಿದೆ. ವಾಹನಗಳಿಂದ ಬಿದ್ದು ಗಾಯ ಮಾಡಿಕೊಳ್ಳುವ ಘಟನೆಗಳು ಸಾಮಾನ್ಯವಾಗಿದೆ. ಅಲ್ಲದೆ ಚಕ್ರಗಳು ಪಂಕ್ಚರ್ ಆಗಿ ಮತ್ತಷ್ಟು ತೊಂದರೆ ಅನುಭವಿಸಬೇಕಿದೆ ಎನ್ನುತ್ತಾರೆ ಗ್ರಾಮಸ್ಥರು.ಬೆಳ್ಳಿಕೆರೆ, ಮುತ್ಸಂದ್ರ, ಕೋಟೂರು, ಮುತ್ಕೂರು ಗ್ರಾಮಗಳಿಗೆ ಹೋಗುವ ಸಂಪರ್ಕ ರಸ್ತೆ ಇದಾಗಿದ್ದು ವಾಹನ ಸವಾರರು ಪ್ರತಿನಿತ್ಯ ಪ್ರಯಾಣಿಸಲು ಹರಸಾಹಸ ಪಡಬೇಕಿದೆ. ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಪ್ರಾಂತ ರೈತ ಸಂಘದ ಮುಖಂಡ ಆರ್.ಆರ್.ಮನೋಹರ್.`ಚುನಾವಣೆ ನೀತಿಸಂಹಿತೆ ಬಂದ ಕಾರಣ ಹಾಗೂ ಕಾಮಗಾರಿಗೆ ಹಣ ಬಿಡುಗಡೆಯಾಗದ ಕಾರಣ ಕಾಮಗಾರಿಯಲ್ಲಿ ವಿಳಂಬವಾಗಿತ್ತು. ಕಾಮಗಾರಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸುವಂತೆ ಸಂಬಂಧಿಸಿದ ಗುತ್ತಿಗೆದಾರನಿಗೆ ನೋಟಿಸ್ ನೀಡಲಾಗಿದೆ' ಎನ್ನುತ್ತಾರೆ ಜಿಲ್ಲಾ ಪಂಚಾಯ್ತಿಯ ಸಹಾಯಕ ಕಾರ್ಯಪಾಲಕ ಎಂಜನಿಯರ್ ಕೃಷ್ಣಮೂರ್ತಿ.ಶಂಕುಸ್ಥಾಪನೆ:  ಪಟ್ಟಣದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 46 ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ 7 ಹೆಚ್ಚುವರಿ ಕೊಠಡಿಗಳಿಗೆ ಶಾಸಕ ಎನ್.ನಾಗರಾಜು ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು.`ಕಾಲೇಜಿಗೆ ಅಗತ್ಯವಿರುವ ಡೆಸ್ಕ್, ಉಪನ್ಯಾಸಕರ ಕೊರತೆ ಮುಂತಾದವುಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು' ಎಂದು ಅವರು ಭರವಸೆ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.