ಸೋಮವಾರ, ಅಕ್ಟೋಬರ್ 14, 2019
28 °C

ಸ್ಥಳೀಯ ಸಂಸ್ಥೆಗಳ ಚುನಾವಣೆ: ಕಾಂಗ್ರೆಸ್ ಮುನ್ನಡೆ

Published:
Updated:

ಬೆಂಗಳೂರು:  ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಒಟ್ಟು 62 ಸ್ಥಾನಗಳಿಗೆ ಇದೇ 10ರಂದು ನಡೆದ ಚುನಾವಣೆಯ ಫಲಿತಾಂಶ ಶುಕ್ರವಾರ ಪ್ರಕಟ ವಾಗಿದ್ದು, ಕಾಂಗ್ರೆಸ್ 25 ಸ್ಥಾನ ಗಳನ್ನು ಗಳಿಸಿ ಮೊದಲ ಸ್ಥಾನದಲ್ಲಿದೆ.ಬಿಜೆಪಿ 20, ಜೆಡಿಎಸ್ 7 ಸ್ಥಾನ ಗಳನ್ನು ಗಳಿಸಿದ್ದರೆ, ಪಕ್ಷೇತರ ಅಭ್ಯರ್ಥಿಗಳು ಹತ್ತು ಕಡೆ ಜಯ ಗಳಿಸಿದ್ದಾರೆ. ಕೋಲಾರ ಜಿಲ್ಲೆಯ ವೇಮಗಲ್ ಮತ್ತು ಚಿಕ್ಕಮಗಳೂರು ಜಿಲ್ಲೆಯ ಸರಸ್ವತಿಪುರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ. ತಾಲ್ಲೂಕು ಪಂಚಾಯಿತಿಗಳ 12 ಕ್ಷೇತ್ರಗಳ ಪೈಕಿ ಬಿಜೆಪಿ 5, ಕಾಂಗ್ರೆಸ್ 3, ಜೆಡಿಎಸ್ ಮತ್ತು ಪಕ್ಷೇತರರು ತಲಾ 2 ಸ್ಥಾನಗಳನ್ನು ಗಳಿಸಿದ್ದಾರೆ.ನಗರ ಸ್ಥಳೀಯ ಸಂಸ್ಥೆಗಳ 48 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 22, ಬಿಜೆಪಿ 15, ಜೆಡಿಎಸ್ 3 ಮತ್ತು ಪಕ್ಷೇತರರು 8 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ.ವಾಡಿ ಪುರಸಭೆಯ ಒಟ್ಟು 23 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 11, ಬಿಜೆಪಿ 7 ಮತ್ತು ಪಕ್ಷೇತರರು ಐದು ಸ್ಥಾನ ಗಳಿಸಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಡಿ.ಕೆ. ರವೀಂದ್ರನಾಥ್ `ಪ್ರಜಾವಾಣಿ~ಗೆ ತಿಳಿಸಿದರು.

Post Comments (+)