ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಕರೆ

7

ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಕರೆ

Published:
Updated:
ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಕರೆ

ಯಲಹಂಕ: `ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಜನರ ಜೀವನ ಗುಣಮಟ್ಟ ಸುಧಾರಣೆಯಾಗಲು ಸಂಘಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು' ಎಂದು ಕೃಷಿ ಸಚಿವ ಕೃಷ್ಣಬೈರೇಗೌಡ ಹೇಳಿದರು.ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಎಂಸಿಇಸಿಎಚ್‌ಎಸ್ ಬಡಾವಣೆಯಲ್ಲಿ ಡಾ.ಶಿವರಾಮಕಾರಂತನಗರ 2ನೇ ಹಂತ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.`ಶೀಘ್ರದಲ್ಲಿ ಈ ಭಾಗಕ್ಕೆ ಕಾವೇರಿ ನೀರು ಒದಗಿಸಲು ಹಾಗೂ ಒಳಚರಂಡಿ ವ್ಯವಸ್ಥೆಯ ಸಂಪರ್ಕ ಕಲ್ಪಿಸಲು ಮೊದಲ ಆದ್ಯತೆ ನೀಡಲಾಗುವುದು' ಎಂದು ಅವರು ಭರವಸೆ ನೀಡಿದರು.ಸಂಘದ ಅಧ್ಯಕ್ಷ ಡಾ.ರಾಜೇಶ್ ಇ.ಬಿ. ಮಾತನಾಡಿ, ಸಂಘದ ಮುಖಾಂತರ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವುದು, ಅಂಗವಿಕಲರು ಮತ್ತು ಬಡಜನರಿಗೆ ನೆರವು, ಸಾಹಿತಿಗಳು ಹಾಗೂ ದೇಶಕ್ಕಾಗಿ ಸೇವೆ ಸಲ್ಲಿಸಿರುವ ವ್ಯಕ್ತಿಗಳನ್ನು ಆಹ್ವಾನಿಸಿ ಸನ್ಮಾನಿಸುವ ಕಾರ್ಯಕ್ರಮ ಸೇರಿದಂತೆ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಕ್ರೀಡಾ ಚಟುವಟಿಕೆಗಳನ್ನು ನಡೆಸಲು ಉದ್ದೇಶಿಸಲಾಗಿದೆ' ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry