ಗುರುವಾರ , ಮೇ 19, 2022
21 °C

ಸ್ಥಾನಮಾನ ಸಿಗದಿದ್ದರೆ ಬಿಜೆಪಿ ಮತ್ತೆ ಅಧಿಕಾರಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೊರು: ಲಿಂಗಾಯತರಿಗೆ ಈ ಸಲವೂ ಸೂಕ್ತ ಪ್ರಾತಿನಿಧ್ಯ ಮತ್ತು ಗೌರವ ಸಿಗದಿದ್ದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತಾರೆ ಎನ್ನುವ ಅಂಶವನ್ನು ಕಾಂಗ್ರೆಸ್ ಮುಖಂಡರೂ ಆದ ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ. ಪ್ರಕಾಶ್ ಶುಕ್ರವಾರ ಇಲ್ಲಿ ತಿಳಿಸಿದರು.ಕಾಂಗ್ರೆಸ್‌ನ ಲಿಂಗಾಯತ ಮುಖಂಡರ ಸಭೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು ‘ಕಾಂಗ್ರೆಸ್ ಪಕ್ಷ ಲಿಂಗಾಯತರನ್ನು ನಿರ್ಲಕ್ಷ್ಯ ಮಾಡುತ್ತಿದೆ ಎನ್ನುವ ಭಾವನೆ ಲಿಂಗಾಯತ ಜನಾಂಗಕ್ಕೆ ಇದೆ. ಇದನ್ನು ಹೋಗಲಾಡಿಸಬೇಕಾದರೆ ಕಾಂಗ್ರೆಸ್ ಎಚ್ಚೆತ್ತುಕೊಳ್ಳಬೇಕು. ಪಕ್ಷದಲ್ಲಿ ಲಿಂಗಾಯತರಿಗೂ ಸೂಕ್ತ ಸ್ಥಾನಮಾನಗಳನ್ನು ನೀಡಬೇಕು’ ಎಂದು ಹೇಳಿದರು.‘ಲಿಂಗಾಯತರಿಗೆ ಸೂಕ್ತ ಸ್ಥಾನಮಾನ ಸಿಗದಂತೆ ಪಕ್ಷದಲ್ಲಿ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಕೆಲಸ ಮಾಡುತ್ತಿವೆ. ದೆಹಲಿಗೆ ಹೋಗಿ ಪಕ್ಷದ ಹೈಕಮಾಂಡ್ ಅನ್ನು ಭೇಟಿ ಮಾಡಲು ಬಿಡುತ್ತಿಲ್ಲ’ ಎಂದು ನೇರ ಆರೋಪ ಮಾಡಿದರು.ಲಿಂಗಾಯತರೆಲ್ಲರೂ ಬಿಜೆಪಿ ಪರ ಎನ್ನುವ ಭಾವನೆ ಇದೆ. ಅದನ್ನು ಹೋಗಲಾಡಿಸಲು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಈ ಸರ್ಕಾರವನ್ನು ಕಿತ್ತೊಗೆಯಬೇಕಾದರೆ ಕಾಂಗ್ರೆಸ್‌ನ ಹೋರಾಟಕ್ಕೆ ಲಿಂಗಾಯತರ ಬೆಂಬಲವೂ ಬೇಕಾಗಿದೆ ಎಂದು ಹೇಳಿದರು.       

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.