ಮಂಗಳವಾರ, ಏಪ್ರಿಲ್ 20, 2021
29 °C

ಸ್ನಾತಕೋತ್ತರ ಪದವಿ: ಪ್ರಥಮ ಸೆಮಿಸ್ಟರ್‌ಗೆ ಕೌನ್ಸೆಲಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಯ ಪ್ರಥಮ ಸೆಮಿಸ್ಟರ್‌ಗೆ ಕೇಂದ್ರೀಕೃತವಾಗಿ ಈ ಕೆಳಕಂಡ ದಿನಾಂಕ ಮತ್ತು ಪ್ರತ್ಯೇಕ ವಿಭಾಗಗಳ ಅನುಸಾರವಾಗಿ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.ಎಂಎಸ್‌ಡಬ್ಲ್ಯು ಮತ್ತು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗಕ್ಕೆ ಜು. 23 ರಂದು ಕೌನ್ಸೆಲಿಂಗ್ ನಡೆಯಲಿದೆ. ವಿಜ್ಞಾನ, ಕಂಪ್ಯೂಟರ್ ವಿಜ್ಞಾನ ಮತ್ತು ವಾಣಿಜ್ಯ ವಿಷಯಗಳಿಗೆ ಜು. 24 ರಂದು ಹಾಗೂ ಸಾಮಾಜಿಕ ವಿಜ್ಞಾನ ಮತ್ತು ಭಾಷಾ ವಿಜ್ಞಾನಕ್ಕೆ ಜು. 25 ರಂದು ಕೌನ್ಸೆಲಿಂಗ್ ನಡೆಯಲಿದೆ.ಪ್ರವೇಶ ಬಯಸುವ ವಿದ್ಯಾರ್ಥಿಗಳು ಕೌನ್ಸೆಲಿಂಗ್‌ನಲ್ಲಿ ಸಂಬಂಧಪಟ್ಟ ಎಲ್ಲ ಮೂಲ ದಾಖಲಾತಿಗಳು ಹಾಗೂ ನಿಗದಿತ ಶುಲ್ಕದೊಂದಿಗೆ ಸಕಾಲದಲ್ಲಿ ಹಾಜರಾಗಬೇಕು. ಅರ್ಹತೆ ಮತ್ತು ಮೀಸಲಾತಿಯನ್ನು ಆಧರಿಸಿ, ಹಂಚಿಕೆ ಮಾಡಲ್ಪಟ್ಟ ಸ್ಥಾನಕ್ಕೆ ಸ್ಥಳದಲ್ಲಿಯೇ ಪ್ರವೇಶ ನೀಡಲಾಗುತ್ತದೆ. ವಿದ್ಯಾರ್ಥಿಗಳು ಆ ದಿನದಂದೇ ನಿಗದಿತ ಶುಲ್ಕ ಪಾವತಿಸಿ ಪ್ರವೇಶ ದೃಢೀಕರಿಸಿಕೊಳ್ಳಬೇಕು ಎಂದು ಕುಲಸಚಿವರು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.