ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ

7

ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ

Published:
Updated:

ಬೆಂಗಳೂರು: ಐ.ಎ.ಎಸ್, ಕೆ.ಎ.ಎಸ್ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತವಾಗಿ ತರಬೇತಿ ನೀಡಲು ಅರ್ಹ ಈಡಿಗ ಪದವೀಧರರಿಂದ ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ ಅರ್ಜಿ ಆಹ್ವಾನಿಸಿದೆ.ಆಸಕ್ತರು ತಮ್ಮ ಇತ್ತೀಚಿನ ಭಾವಚಿತ್ರ, ವಿಳಾಸ, ಎಸ್ಸೆಸ್ಸೆಲ್ಸಿ, ಪಿಯು, ಪದವಿ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿ, ದೂರವಾಣಿ ಸಂಖ್ಯೆಯ ವಿವರಗಳನ್ನು ನವೆಂಬರ್ 15ರ ಒಳಗಾಗಿ ಸಲ್ಲಿಸಬೇಕು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಟಿ. ನರಸಿಂಹಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಅರ್ಜಿ ಸಲ್ಲಿಸಬೇಕಾದ ವಿಳಾಸ: ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ, ಕೊಠಡಿ ಸಂಖ್ಯೆ 20, ಮೊದಲ ಮಹಡಿ, ನಂ. 185, ಈಡಿಗ ಭವನ, ರಾಜೀವ್ ಗಾಂಧಿ ವೃತ್ತ, ಶೇಷಾದ್ರಿಪುರ, ಬೆಂಗಳೂರು-560020. ಹೆಚ್ಚಿನ ಮಾಹಿತಿಗೆ ದೂರವಾಣಿ 080-23469858/23560574 ಸಂಪರ್ಕಿಸಬಹುದು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry