ಸ್ಪರ್ಧಾತ್ಮಕ ಪರೀಕ್ಷೆ: ಒಂದು ಲಕ್ಷ ಪ್ರೋತ್ಸಾಹ ಧನ

ಸೋಮವಾರ, ಮೇ 20, 2019
32 °C

ಸ್ಪರ್ಧಾತ್ಮಕ ಪರೀಕ್ಷೆ: ಒಂದು ಲಕ್ಷ ಪ್ರೋತ್ಸಾಹ ಧನ

Published:
Updated:

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಖಿಲ ಭಾರತ ಸೇವೆಗಳು (ಐಎಎಸ್, ಐಪಿಎಸ್, ಐಎಫ್‌ಎಸ್ ಇತ್ಯಾದಿ) ಹಾಗೂ ಕೇಂದ್ರಾಡಳಿತ ಸೇವೆಗಳಿಗೆ ಆಯ್ಕೆಯಾಗುವ ಕರ್ನಾಟಕದ ಅಭ್ಯರ್ಥಿಗಳಿಗೆ 2011-12ನೇ ಸಾಲಿನಿಂದ ಜಾರಿಗೆ ಬರುವಂತೆ ತಲಾ ಒಂದು ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡಲು ಸರ್ಕಾರ ಮಂಜೂರಾತಿ ನೀಡಿದೆ.1ರಿಂದ 10ನೇ ತರಗತಿವರೆಗೆ ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದವರಿಗೆ ಮಾತ್ರ ಈ ಸೌಲಭ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಎಂಜಿನಿಯರಿಂಗ್ ಕೋರ್ಸ್: ಇಂದು ಕೌನ್ಸೆಲಿಂಗ್

ಪ್ರಜಾವಾಣಿ ವಾರ್ತೆ

ಬೆಂಗಳೂರು:
ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕೆ ಬುಧವಾರ 45001ರಿಂದ 51000 ರ‌್ಯಾಂಕ್‌ವರೆಗಿನ ವಿದ್ಯಾರ್ಥಿಗಳಿಗೆ ಕ್ಯಾಷುವಲ್ ಸುತ್ತಿನ ಕೌನ್ಸೆಲಿಂಗ್ ನಡೆಯಲಿದೆ. ವಿವಿಧ ವಿಷಯಗಳಲ್ಲಿ ಒಟ್ಟು 14,274 ಸೀಟುಗಳು ಪ್ರವೇಶಕ್ಕೆ ಲಭ್ಯವಾಗಲಿವೆ.ಸಾಮಾನ್ಯ ವರ್ಗದ ಕೋಟಾದಡಿ 12,366 ಸೀಟುಗಳು ಹಂಚಿಕೆಗೆ ಲಭ್ಯವಿವೆ. ಇದೇ 16ಕ್ಕೆ ಕೌನ್ಸೆಲಿಂಗ್ ಪ್ರಕ್ರಿಯೆ ಮುಕ್ತಾಯವಾಗಲಿದ್ದು, ಈ ಬಾರಿಯೂ ಸಾವಿರಾರು ಸೀಟುಗಳು ಉಳಿಯುವ ಸಾಧ್ಯತೆಗಳಿವೆ.

 

ಸ್ನಾತಕೋತ್ತರ ಪ್ರವೇಶ: 17ಕ್ಕೆ ತಪಾಸಣೆ

ಬೆಂಗಳೂರು:  ಅಂಗವಿಕಲ ಕೋಟಾದ ಅಡಿ ಎಂಬಿಎ, ಎಂಸಿಎ, ಎಂಇ, ಎಂಟೆಕ್ ಕೋರ್ಸ್‌ಗಳಿಗೆ ಪ್ರವೇಶ ಬಯಸಿರುವ ಅಭ್ಯರ್ಥಿಗಳಿಗೆ ಇದೇ 17ರಂದು ವೈದ್ಯಕೀಯ ತಪಾಸಣೆ ನಡೆಯಲಿದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆವರಣದಲ್ಲಿ ಅಂದು ಬೆಳಿಗ್ಗೆ 11 ಕ್ಕೆ ತಪಾಸಣೆ ಆರಂಭವಾಗಲಿದ್ದು ವೈದ್ಯಕೀಯ ಸಮಿತಿ ನೀಡುವ ವರದಿಆಧರಿಸಿ ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ನೀಡಲಾಗುವುದು. ಎಂಇ, ಎಂಟೆಕ್ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹಅಭ್ಯರ್ಥಿಗಳಿಗೆ ಅದೇ ದಿನ ಮಧ್ಯಾಹ್ನ 3 ಗಂಟೆಗೆ ಸೀಟು ಆಯ್ಕೆ ನಡೆಯಲಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry