ಶುಕ್ರವಾರ, ಮೇ 27, 2022
30 °C

ಸ್ಪರ್ಧೆಯಲ್ಲಿ ಭಾಗವಹಿಸುವಿಕೆ ಮುಖ್ಯ: ಮಾಡಾಳ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಗಿರಿ: ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಜಾನಪದ ಕಲೆಗಳು ಜೀವಂತವಾಗಿವೆ ಬಿಜೆಪಿ ಯುವ ಮುಖಂಡ ಮಾಡಾಳ್ ಮಲ್ಲಿಕಾರ್ಜುನ್ ಹೇಳಿದರು.ತಾಲ್ಲೂಕಿನ ಟಿ. ಗೊಲ್ಲರಹಟ್ಟಿಯಲ್ಲಿ ಭಾನುವಾರ ಮುಕ್ತಾಯಗೊಂಡ ತಾಲ್ಲೂಕುಮಟ್ಟದ ಯುವಜನ ಮೇಳದಲ್ಲಿ ಅವರು ಮಾತನಾಡಿದರು.ಯಾವುದೇ ಸ್ಪರ್ಧೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಆದರೆ, ಸ್ಪರ್ಧೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದರು.ಬಿಜೆಪಿ ಮುಖಂಡ ಟಿ.ವಿ. ರಾಜು ಪಟೇಲ್, ತಾ.ಪಂ. ಸದಸ್ಯ ಸಿ.ಎಚ್. ವೀರಪ್ಪ, ರಾಜಗೊಂಡನಹಳ್ಳಿ ಗ್ರಾ.ಪಂ. ಅಧ್ಯಕ್ಷ ಯು. ಬಸವರಾಜ್, ಟಿ. ನಾಗರಾಜ್, ಎಸ್.ಸಿ. ವಿಶ್ವನಾಥ್ ಇದ್ದರು. ಗ್ರಾ.ಪಂ. ಅಧ್ಯಕ್ಷೆ ವಿಜಯರವಿ ಅಧ್ಯಕ್ಷತೆ ವಹಿಸಿದ್ದರು. ಜಿ.ಎಸ್. ಪಾಲಾಕ್ಷಪ್ಪ ಸ್ವಾಗತಿಸಿದರು. ಜಕ್ಕಲಿ ಶಿವಮೂರ್ತಿ ನಿರೂಪಿಸಿದರು. ಪಿ.ವಿ. ನಾಗರಾಜ್ ವಂದಿಸಿದರು.ಪ್ರತಿಭೆಗೆ ಪ್ರೋತ್ಸಾಹ ಅಗತ್ಯ: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಗುರುತಿಸಿ ಹೊರತರುವ ಕಾರ್ಯವನ್ನು ಪ್ರಾಮಾಣಿಕವಾಗಿ ಶಿಕ್ಷಕರು ಮಾಡಬೇಕು ಎಂದು ತಾ.ಪಂ. ಸದಸ್ಯ ಎ.ಬಿ. ಶಿವಕುಮಾರ್ ಹೇಳಿದರು.ತಾಲ್ಲೂಕಿನ ಅಗರಬನ್ನಿಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ತಾಲ್ಲೂಕು ಮಕ್ಕಳ ಸಾಹಿತ್ಯ ವೇದಿಕೆ ವತಿಯಿಂದ ಈಚೆಗೆ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ತಾಲ್ಲೂಕು ಕಸಾಪ ಅಧ್ಯಕ್ಷ ಎಚ್. ನೀಲಪ್ಪ ಮಾತನಾಡಿದರು.ಗ್ರಾ.ಪಂ. ಮಾಜಿ ಅಧ್ಯಕ್ಷ ಬಿ.ಕೆ. ರಾಜಪ್ಪ, ಮಾಜಿ ಕಸಾಪ ಅಧ್ಯಕ್ಷ ಕೆ. ಸಿದ್ದಲಿಂಗಪ್ಪ, ಸಂಘಟನಾ ಕಾರ್ಯದರ್ಶಿ ಸಿರಾಜ್ ಅಹಮದ್, ಯುವ ಸಾಹಿತಿ ಫೈಜ್ನಟ್ರಾಜ್, ಕಾರ್ಯದರ್ಶಿ ಕೆ.ಸಿ. ನಾಗರಾಜ್, ಪ.ಪಂ. ಸದಸ್ಯ ರೆಹಮತ್ ಉಲ್ಲಾ, ಅಬ್ದುಲ್ ಮಜೀದ್ ಖಾನ್, ಫಯಾಜ್ ಅಹಮದ್, ಅಬ್ದುಲ್ ಘನಿಸಾಬ್, ಮುಜೀಬ್ ಆಲಿ  ಇದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.ಎಸ್‌ಡಿಎಂಸಿ ಅಧ್ಯಕ್ಷ ಶಫೀಉಲ್ಲಾ ಅಧ್ಯಕ್ಷತೆ ವಹಿಸಿದ್ದರು. ಸೈಯದ್ ಇಲ್ಯಾಸ್ ಅಹಮದ್ ಸ್ವಾಗತಿಸಿದರು. ಎಂ.ಬಿ. ನಾಗರಾಜ್ ಕಾಕನೂರು ಕಾರ್ಯಕ್ರಮ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.