ಸ್ಪಾಟ್ ಫಿಕ್ಸಿಂಗ್: ವಿಚಾರಣೆ ಮುಂದೂಡಲು ನಿರಾಕರಿಸಿದ ಐಸಿಸಿ
ಕರಾಚಿ (ಪಿಟಿಐ): ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ)ಯು ನಿಗದಿ ಮಾಡಿರುವ ದಿನಾಂಕವನ್ನು ಮುಂದೂಡಬೇಕೆಂದು ಮಾಜಿ ನಾಯಕ ಸಲ್ಮಾನ್ ಬಟ್ ಸಲ್ಲಿಸಿರುವ ಕೋರಿಕೆಯನ್ನು ತಳ್ಳಿಹಾಕಲಾಗಿದೆ.
ದೋಹಾದಲ್ಲಿ ಜನವರಿ 6ರಿಂದ 11ರವರೆಗೆ ವಿಚಾರಣೆ ನಡೆಸಲು ಐಸಿಸಿ ತೀರ್ಮಾನಿಸಿದೆ. ಆದರೆ ವಿಚಾರಣೆ ಮುಂದೂಡುವುದು ಅಗತ್ಯ ಹಾಗೂ ತಮಗೆ ಕಾಲಾವಕಾಶ ಬೇಕೆಂದು ಬಟ್ ತಮ್ಮ ಅರ್ಜಿಯಲ್ಲಿ ತಿಳಿಸಿದ್ದರು. ಆದರೆ ಅದನ್ನು ಐಸಿಸಿ ಮಾನ್ಯಮಾಡಲು ಸಾಧ್ಯವಿಲ್ಲವೆಂದು ಹೇಳಿ, ಸಾರಾಸಗಟಾಗಿ ತಿರಸ್ಕರಿಸಿದೆ.
ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್‌ನಲ್ಲಿ ನಡೆದ ಟೆಸ್ಟ್ ಸಂದರ್ಭದಲ್ಲಿ ಸ್ಪಾಟ್ ಫಿಕ್ಸಿಂಗ್‌ನಲ್ಲಿ ಭಾಗಿಯಾದ ಆರೋಪ ಹೊತ್ತಿರುವ ಸಲ್ಮಾನ್ ಬಟ್, ವೇಗಿಗಳಾದ ಮೊಹಮ್ಮದ್ ಆಸಿಫ್ ಹಾಗೂ ಮೊಹಮ್ಮದ್ ಅಮೇರ್ ಅವರನ್ನು ಐಸಿಸಿ ಅಮಾನತುಗೊಳಿಸಿದೆ. ಇವರು ಈ ಶಿಕ್ಷೆಯ ವಿರುದ್ದ ಕಾನೂನು ಹೋರಾಟ ನಡೆಸುತ್ತಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.