ಸ್ಪೀಕರ್ ಆದೇಶ ಪ್ರಶ್ನಿಸಿ ಕೋರ್ಟ್‌ನಲ್ಲಿ ಅರ್ಜಿ

7

ಸ್ಪೀಕರ್ ಆದೇಶ ಪ್ರಶ್ನಿಸಿ ಕೋರ್ಟ್‌ನಲ್ಲಿ ಅರ್ಜಿ

Published:
Updated:

ಇಸ್ಲಾಮಾಬಾದ್ (ಪಿಟಿಐ): ನ್ಯಾಯಾಲಯ ನಿಂದನೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾದ ಕಾರಣಕ್ಕೆ ಪ್ರಧಾನಿ ಯುಸೂಫ್ ರಜಾ ಗಿಲಾನಿ ಅವರನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ ಎಂಬ ಸ್ಪೀಕರ್ ಫೆಹಮಿದಾ ಮಿರ್ಜಾ ಅವರ ತೀರ್ಮಾನವನ್ನು ವಿರೋಧ ಪಕ್ಷಗಳಾದ ಪಿಎಂಎಲ್-ಎನ್ ಮತ್ತು ತೆಹರಿಕ್-ಎ-ಇನ್ಸಾಫ್  ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿವೆ.ಪಿಎಂಎಲ್-ಎನ್ ಸಂಸದ ಖ್ವಾಜಾ ಆಸಿಫ್ ಪಕ್ಷದ ಪರವಾಗಿ ಸುಪ್ರೀಂಕೋರ್ಟ್‌ನಲ್ಲಿ ಸ್ಪೀಕರ್ ಆದೇಶದ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದಾರೆ. ತೆಹರಿಕ್-ಎ-ಇನ್ಸಾಫ್ ಪಕ್ಷ ಸಹ ಇದೇ ರೀತಿಯ ಅರ್ಜಿಯನ್ನು ಸಲ್ಲಿಸಿದೆ. ಎರಡೂ ಅರ್ಜಿಗಳಲ್ಲಿ ಪ್ರಧಾನಿ, ಸ್ಪೀಕರ್, ಸರ್ಕಾರ ಮತ್ತು ಚುನಾವಣಾ ಆಯೋಗವನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry