ಮುಂಬೈ (ಪಿಟಿಐ): ಬೆಂಗಳೂರಿನ ಸಿಬ್ಬಂದಿ ಹಾಗೂ 137 ಪ್ರಯಾಣಿಕರಿದ್ದ ಸ್ಪೈಸ್ ಜೆಟ್ ವಿಮಾನ ಇಲ್ಲಿನ ನಿಲ್ದಾಣದಲ್ಲಿ ತಾಂತ್ರಿಕ ದೋಷದಿಂದಾಗಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

`ಬೆಂಗಳೂರಿನಿಂದ ಆಗಮಿಸಿದ್ದ ವಿಮಾನ ಮಧ್ಯಾಹ್ನ 12.21ರ ಹೊತ್ತಿಗೆ ತುರ್ತು ಭೂಸ್ಪರ್ಶ ಮಾಡಿತು. ಎಲ್ಲ ಪ್ರಯಾಣಿಕರೂ ಸುರಕ್ಷಿತವಾಗಿದ್ದಾರೆ~ ಎಂದು ವಿಮಾನ ನಿಲ್ದಾಣದ ವಕ್ತಾರರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಇಸ್ತಾಂಬುಲ್ನಿಂದ ಬಂದಿದ್ದ ಟರ್ಕಿ ವಿಮಾನವೊಂದು ಶುಕ್ರವಾರ ಬೆಳಗಿನ ಜಾವ ಇಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು. ಈ ವಾರ ಏರ್ ಇಂಡಿಯಾದ ಎರಡು ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದವು.

ರನ್ವೇ ಸ್ಥಗಿತ: ಭಾರಿ ಮಳೆಯ ಕಾರಣ ಶುಕ್ರವಾರ ಟರ್ಕಿ ವಿಮಾನಕ್ಕೆ ಭೂಸ್ಪರ್ಶ ಮಾಡಲು ತೊಂದರೆಯಾಗಿ ಮಣ್ಣಿನಲ್ಲಿ ಸಿಕ್ಕಿಕೊಂಡ ಕಾರಣ ಶನಿವಾರ ಸಂಜೆವರೆಗೂ ಮುಂಬೈ ವಿಮಾನ ನಿಲ್ದಾಣದ ಮುಖ್ಯ ರನ್ವೇ ಸ್ಥಗಿತಗೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.