ಶನಿವಾರ, ಮೇ 8, 2021
18 °C

ಸ್ಫೋಟ: ಕಲ್ಯಾಣ ಮಂಟಪ ಮಾಲೀಕನ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸುಮನಹಳ್ಳಿಯಲ್ಲಿರುವ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದ ಕಟ್ಟಡದಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಕಲ್ಯಾಣ ಮಂಟಪದ ಮಾಲೀಕ ಶ್ರೀನಿವಾಸ ನಾಯ್ಡು ಅವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.ಘಟನೆ ನಂತರ ಶ್ರೀನಿವಾಸ್ ನಾಯ್ಡು ಪರಾರಿಯಾಗಿದ್ದರು. ಶ್ರೀನಿವಾಸ್ ಅವರು ತಮಿಳುನಾಡಿನಲ್ಲಿ ಇರುವ ಬಗ್ಗೆ ಮಾಹಿತಿ ಕಲೆ ಹಾಕಿದ ಸಿಬ್ಬಂದಿ ಅವರನ್ನು ಶುಕ್ರವಾರ ಬಂಧಿಸಿ ನಗರಕ್ಕೆ ಕರೆ ತಂದಿದ್ದಾರೆ.`ಆರೋಪಿಯ ವಿರುದ್ಧ ಸ್ಫೋಟಕ ವಸ್ತುಗಳ ಕಾಯ್ದೆ ಮತ್ತು ಐಪಿಸಿ ಸೆಕ್ಷನ್‌ಗಳನ್ವಯ ಪ್ರಕರಣ ದಾಖಲಿಸಲಾಗಿದೆ. ಡೈಯಿಂಗ್ ಘಟಕದ ಮಾಲೀಕ ದಿನೇಶ್ ಕುಮಾರ್ ಬಂಧನಕ್ಕೂ ಕ್ರಮ ಕೈಗೊಳ್ಳಲಾಗಿದೆ~ ಎಂದು ಪಶ್ಚಿಮ ವಿಭಾಗದ ಡಿಸಿಪಿ ಎಸ್.ಎನ್. ಸಿದ್ದರಾಮಪ್ಪ `ಪ್ರಜಾವಾಣಿ~ಗೆ ತಿಳಿಸಿದರು.`ನಾಲ್ಕು ಮಹಡಿ ಕಟ್ಟಡದ ಸೆಲ್ಲಾರ್ ಅನ್ನು ಶ್ರೀನಿವಾಸ ನಾಯ್ಡು, ದಿನೇಶ್ ಕುಮಾರ್‌ಗೆ ಬಾಡಿಗೆಗೆ ಕೊಟ್ಟಿದ್ದರು. ದಿನೇಶ್ ಅವರು ಅಲ್ಲಿ ಡೈಯಿಂಗ್ ಘಟಕ ನಡೆಸುತ್ತಿದ್ದರು. ಬಟ್ಟೆಗೆ ಬಣ್ಣ ಹಾಕಲು ಬಳಸುವ ರಾಸಾಯನಿಕ ವಸ್ತುಗಳನ್ನು ಸಂಗ್ರಹಿಸಿಡಲಾಗಿತ್ತು. ವಿಧಿ ವಿಜ್ಞಾನ ಪ್ರಯೋಗಾಲಯ ಸಿಬ್ಬಂದಿ ವರದಿ ನೀಡಿರುವಂತೆ ಅಸಿಟೋನ್ ಎಂಬ ರಾಸಾಯನಿಕದಿಂದ ಸ್ಫೋಟ ಸಂಭವಿಸಿರುವ ಸಾಧ್ಯತೆ ಇದೆ~ ಎಂದು ಅವರು ಹೇಳಿದರು.`ದೊಡ್ಡ ಗಾತ್ರದ ಪ್ಲಾಸ್ಟಿಕ್ ಟ್ಯಾಂಕ್‌ನಲ್ಲಿ ಅವರು ರಾಸಾಯನಿಕ ಸಂಗ್ರಹಿಸಿದ್ದರು. ಅಲ್ಲಿಯೇ ಇದ್ದ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿದೆ. ಅನಿಲ ಒತ್ತಡ ಹೆಚ್ಚಾದ ನಂತರ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ~ ಎಂದು ಸಿದ್ದರಾಮಪ್ಪ ಮಾಹಿತಿ ನೀಡಿದರು.ಮೃತನ ಗುರುತು ಪತ್ತೆ: `ಸ್ಫೋಟದಲ್ಲಿ ಮೃತಪಟ್ಟಿದ್ದ ಇನ್ನೊಬ್ಬ ವ್ಯಕ್ತಿಯನ್ನು ಸುಬ್ರಮಣಿ (30) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸುಬ್ರಮಣಿ ಅವರು ಬಟ್ಟೆಗೆ ಬಣ್ಣ ಹಾಕುವ ಘಟಕದ (ಡೈಯಿಂಗ್ ಯೂನಿಟ್) ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಅವರು ಪತ್ನಿಯ ಜತೆ ವಾಸವಿದ್ದರು. ಗರ್ಭಿಣಿಯಾಗಿದ್ದ ಪತ್ನಿ ಊರಿಗೆ ಹೋಗಿದ್ದರು. ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡ ಕಾರಣ ಅವರ ದೇಹ ಸುಟ್ಟು ಹೋಗಿತ್ತು~ ಎಂದು ಪೊಲೀಸರು ತಿಳಿಸಿದ್ದಾರೆ.ಸುಮನಹಳ್ಳಿಯಲ್ಲಿರುವ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದ ಕಟ್ಟಡದಲ್ಲಿ ಅಡುಗೆ ಅನಿಲ ಸಿಲಿಂಡರ್‌ಗಳು ಸ್ಫೋಟಗೊಂಡು ಕವಿತಾ ಮತ್ತು ಸುಬ್ರಮಣಿ ಅವರು ಮೃತಪಟ್ಟಿದ್ದರು. ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಹನ್ನೆರಡು ಮಂದಿ ಗಾಯಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.