ವಿಜಾಪುರ: ಜಿಲ್ಲೆಯ ಪುರಾತತ್ವ ಸ್ಮಾರಕಗಳ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡ ನಿರ್ಮಾಣ, ನವೀಕರಣ, ದುರಸ್ತಿ ಮತ್ತಿತರ ಕಾಮಗಾರಿ ಕೈಗೊಳ್ಳುವ ಮುನ್ನ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಸ್. ಜಿದ್ದಿಮನಿ ತಿಳಿಸಿದ್ದಾರೆ.

ಪುರಾತತ್ವ ಸ್ಮಾರಕ ತಿದ್ದುಪಡಿ ಮತ್ತು ಮುಂದುವರಿಕೆ ಕಾಯ್ದೆ- 2010ರ ಪ್ರಕಾರ ಸಂರಕ್ಷಿತ ಸ್ಮಾರಕಗಳ ವ್ಯಾಪ್ತಿಯಲ್ಲಿಯ 200 ಮೀಟರ್ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ.

ಈ ಪ್ರದೇಶದಲ್ಲಿ ಹೊಸ ಕಟ್ಟಡಗಳ ನಿರ್ಮಾಣ, ಮರು ಕಟ್ಟಡ ನಿರ್ಮಾಣ, ಕಟ್ಟಡ ನವೀಕರಣ ಮತ್ತು ಕಟ್ಟಡ ದುರಸ್ತಿ ಮಾಡುವುದಕ್ಕಿಂತ ಮುಂಚಿತವಾಗಿ ಹೊಸ ತಿದ್ದುಪಡಿ ನಿಯಮಗಳ ಪ್ರಕಾರ ಸಕ್ಷಮ ಪ್ರಾಧಿಕಾರಗಳಾದ ಬೆಳಗಾವಿಯ ಪ್ರಾದೇಶಿಕ ಆಯುಕ್ತರಿಗೆ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಸಂಬಂಧಿಸಿದ ದಾಖಲಾತಿಗಳೊಂದಿಗೆ ಐದು ಪ್ರತಿಗಳಲ್ಲಿ ಸಲ್ಲಿಸಬೇಕು.

ಸಕ್ಷಮ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆದ ನಂತರವೇ ದುರಸ್ತಿ ಹಾಗೂ ನಿರ್ಮಾಣ, ನವೀಕರಣ ಕಾರ್ಯ ಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಈ ನಿಯಮ ಉಲ್ಲಂಘಿಸಿ ಕಾಮಗಾರಿ ಕೈಗೊಂಡಲ್ಲಿ ಸಂಬಂಧಿಸಿದವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಈಗಾಗಲೇ ಹಲವು ಬಾರಿ ಸೂಚನೆ ನೀಡಿದ್ದರೂ ಕೆಲವರು ಕಾನೂನು ಬಾಹಿರವಾಗಿ ಕಟ್ಟಡ ನಿರ್ಮಾಣ, ಕಟ್ಟಡಗಳ ದುರಸ್ತಿ ಹಾಗೂ ಇನ್ನಿತರ ಕಾಮಗಾರಿ ಕೈಗೊಳ್ಳುತ್ತಿರುವ ಬಗ್ಗೆ ದೂರುಗಳು ಬಂದಿವೆ. ಅದನ್ನೂ ಗಂಭೀರವಾಗಿ ಪರಿಗಣಿಸಲಾಗುತ್ತದೆ. ಯಾವುದೇ ಕಟ್ಟಡ ನಿರ್ಮಾಣಕ್ಕೆ ಮುನ್ನ ಅನುಮತಿ ಪಡೆಯುವುದು ಕಡ್ಡಾಯ ಎಂದು ಅವರು ಹೇಳಿದ್ದಾರೆ.

ನಿಗದಿತ ಅರ್ಜಿ ನಮೂನೆಯನ್ನು ಹಿರಿಯ ಸಹಾಯಕ ಸಂರಕ್ಷಣಾಧಿಕಾರಿ, ಪ್ರಾಚ್ಯವಸ್ತು ಸರ್ವೇಕ್ಷಣಾ ಇಲಾಖೆ, ವಿಜಾಪುರ ಅವರಿಂದ ಪಡೆಯ ಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.