ಗುರುವಾರ , ಮೇ 13, 2021
35 °C

ಸ್ಮಾರಕ ರಕ್ಷಣೆಗೆ ಸಮುದಾಯ ಸಹಕಾರ ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ವಿಶ್ವವಿದ್ಯಾಲಯಗಳು ಸರ್ಕಾರದ ಬೆಂಬಲ ಕೊರತೆಯಿಂದ ಸಂಶೋಧನೆಯಲ್ಲಿ ಸೊರಗುತ್ತಿವೆ.  ಪ್ರಾಚೀನ ನೆಲೆ, ಸ್ಮಾರಕಗಳ ರಕ್ಷಣೆಗೆ ಕೇವಲ ಸರ್ಕಾರದ ಮೇಲೆ ಅವಲಂಬಿತವಾಗದೆ ಸ್ಥಳೀಯ ಸಮುದಾಯಗಳು ಸ್ವಯಂಪ್ರೇರಿತ ವಾಗಿ ಮುಂದೆ ಬರಬೇಕು ಎಂದು ಪಾಂಡಿಚೇರಿಯ ಫ್ರೆಂಚ್ ಇನ್‌ಸ್ಟಿಟ್ಯೂಟ್‌ನ ಭಾರತದ ಇತಿಹಾಸ ವಿಭಾಗ ಮುಖ್ಯಸ್ಥ ಪ್ರೊ.ವೈ. ಸುಬ್ಬರಾಯಲು ಸಲಹೆ ಮಾಡಿದರು.ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ರಾಜ್ಯ ಪುರಾತತ್ವ, ವಸ್ತುಸಂಗ್ರಹಾಲಯ ಹಾಗೂ ಪರಂಪರೆ ಇಲಾಖೆ ಸಂಯುಕ್ತವಾಗಿ `ದಕ್ಷಿಣ ಭಾರತದ ಪುರಾತತ್ವ ಕ್ಷೇತ್ರದಲ್ಲಿ ಇತ್ತೀಚಿನ ಬೆಳವಣಿಗೆಗಳು~ ಕುರಿತು ಹಮ್ಮಿಕೊಂಡಿದ್ದ ಮೂರು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.ವಿಯಟ್ನಾಂನಂಥ ಅತಿ ಬಡ ರಾಷ್ಟ್ರದಲ್ಲಿ ಹೆಜ್ಜೆ ಇಟ್ಟಲ್ಲೆಲ್ಲ ವಸ್ತುಸಂಗ್ರಹಾಲಯಗಳನ್ನು ಸ್ಥಾಪಿಸಿ, ಅದನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಲಾಗುತ್ತಿದೆ. ಆದರೆ, ಸುದೀರ್ಘ ಇತಿಹಾಸ, ಪರಂಪರೆ ಹೊಂದಿರುವ ಭಾರತದಲ್ಲಿ ಇದು ಏಕೆ ಸಾಧ್ಯವಾಗುತ್ತಿಲ್ಲ ಎಂದು ಅವರು ಪ್ರಶ್ನಿಸಿದರು.ಪುರಾತತ್ವ ಕ್ಷೇತ್ರದಲ್ಲಾದ ಬೆಳೆವಣಿಗೆಗಳ ಕುರಿತು ಒಂದೆಡೆ ಮಾಹಿತಿ ಲಭ್ಯವಾಗುವಂತೆ ಸಮಗ್ರ ಗ್ರಂಥಗಳು ಪ್ರಕಟವಾಗಬೇಕು ಎಂದು ಅವರು ಪ್ರತಿಪಾದಿಸಿದರು.ವಿಚಾರಸಂಕಿರಣದಲ್ಲಿ ಆಶಯ ಭಾಷಣ ಮಾಡಿದ ಪುರಾತತ್ವ ಶಾಸ್ತ್ರಜ್ಞ ಪ್ರೊ.ಅ.ಸುಂದರ, ದೇಶದ ಪುರಾತತ್ವ ನೆಲೆಗಳ ಕುರಿತ ಅಧ್ಯಯನ, ಸಂಶೋಧನೆ ಮತ್ತು ಸಂರಕ್ಷಣೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ, ಯುವ ಪೀಳಿಗೆಯಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದರು.ಎಂ.ಎ., ಎಂ.ಫಿಲ್ ಹಾಗೂ ಪಿಎಚ್.ಡಿ ಸಂಶೋಧನೆಯಲ್ಲಿ ತೊಡಗಿರುವ ವಿದ್ಯಾರ್ಥಿಗಾಗಿ ಆಯಾ ವಿಶ್ವವಿದ್ಯಾಲಯಗಳು ಪ್ರಾಧ್ಯಾಪಕರು ಭೂ ಉತ್ಖನನ ಹಾಗೂ ಸಂರಕ್ಷಣೆಗಳ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಬೇಕು ಎಂದರು.ವಿಚಾರ ಸಂಕಿರಣದ ಸಂಚಾಲಕ ಪ್ರೊ.ರಾಜಾರಾಂ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಲಪತಿ ಪ್ರೊ.ಎಸ್.ಎ. ಬಾರಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಪುರಾತತ್ವ ವಸ್ತು ಸಂಗ್ರಹಾಲಯ ಪರಂಪರೆ ಇಲಾಖೆ ಆಯುಕ್ತಕೆ.ಆರ್. ರಾಮಕೃಷ್ಣ ಇದ್ದರು. ಡಾ.ಜಿ.ಸರ್ವಮಂಗಳಾ ಸ್ವಾಗತಿಸಿ ದರು. ಸಂದೀಪ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.