ಶನಿವಾರ, ಮೇ 8, 2021
26 °C

ಸ್ವಉದ್ಯೋಗಕ್ಕೆ ಉತ್ತೇಜನ ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಿಪ್ಪನ್‌ಪೇಟೆ: ಸರ್ಕಾರಿ ಉದ್ಯೋಗಕ್ಕಾಗಿ ಅಲೆದಾಟ ಬಿಟ್ಟು ಸ್ವಯಂ ಉದ್ಯೋಗದ ಕಡೆ ಗಮನ ಹರಿಸುವ ನಿಟ್ಟಿನಲ್ಲಿ ಪದವಿ ವಿದ್ಯಾರ್ಥಿಗಳು ಮುಂದಿನ ಜೀವನ ರೂಪಿಸಿಕೊಳ್ಳಬೇಕು ಎಂದು ಶಿವಮೊಗ್ಗದ ಡಾ.ಎಂ.ಕೆ. ಪುರುಷೋತ್ತಮ್ ತಿಳಿಸಿದರು.ಜಿಎಸ್‌ಬಿ ಸಮಾಜದ ವತಿಯಿಂದ ಈಚೆಗೆ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಾಣಿಜ್ಯ ಹಾಗೂ ನಿರ್ವಹಣಾ ಶಾಸ್ತ್ರಗಳ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ಪ್ರಾಂಶುಪಾಲ ಪ್ರೊ.ಎಂ.ಕೆ. ನಾರಾಯಣ ಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಶೈಕ್ಷಣಿಕವಾಗಿ ಅನುಕೂಲತೆ ಹೊಂದಿರುವ ಪಟ್ಟಣದ ವಿದ್ಯಾರ್ಥಿಗಳಿಗೆ ಸಮನಾಂತರವಾಗಿ ಬೆಳೆಯಲು ಗ್ರಾಮೀಣ ವಿದ್ಯಾರ್ಥಿಗಳು ಆಂಗ್ಲ ಭಾಷೆಯನ್ನು  ಕಲಿತು ನಿರುದ್ಯೋಗ ಸಮಸ್ಯೆ ಎದುರಿಸಬೇಕು ಎಂದು ಕರೆ ನೀಡಿದರು. ಪ್ರೊ. ಕೆ.ಸಿ ಹಿರಿಯಣ್ಣಯ್ಯ ಪ್ರಾಸ್ತಾವಿಕ ಮಾತನಾಡಿದರು.ಕಾಲೇಜು ಅಭಿವೃದ್ಧಿ ಸದಸ್ಯರಾದ ಆರ್.ಎಚ್. ಶ್ರೀನಿವಾಸ ಆಚಾರ್, ದೇವೇಂದ್ರಪ್ಪಗೌಡ, ರಿಯಾಜ್ ಆಹಮದ್, ಯೋಗೇಂದ್ರಪ್ಪ ಹಾಜರಿದ್ದರು.ಸನ್ಮಾನ: ಕಳೆದ ಶೈಕ್ಷಣಿಕ ವರ್ಷದಲ್ಲಿ ಬಿಬಿಎಂ ವಿಭಾಗದಲ್ಲಿ ಹೆಚ್ಚು ಅಂಕಗಳಿಸಿದ ಚೈತ್ರಾ, ಬಿಂದುರಾಣಿ~ ತಸ್ಲಿಮಾಬಾನು ಅವರನ್ನು ಸನ್ಮಾನಿಸಲಾಯಿತು. ದಾಕ್ಷಾಯಣಿ ಸ್ವಾಗತಿಸಿದರು, ಬಿಂದುರಾಣಿ ಕಾರ್ಯಕ್ರಮ ನಿರೂಪಿಸಿದರು. ದರ್ಶನ್ ವಂದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.