ಭಾನುವಾರ, ಮೇ 16, 2021
28 °C

ಸ್ವಚ್ಚ ಗ್ರಾಮ ನಿರ್ಮಾಣಕ್ಕೆ ಸಹಕರಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸ್ವಚ್ಚ ಗ್ರಾಮ ನಿರ್ಮಾಣಕ್ಕೆ ಸಹಕರಿಸಿ

ಕನಕಪುರ: ತಾಲ್ಲೂಕಿನ ತುಂಗಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಳ್ಳಿಗಳನ್ನು `ಸ್ವಚ್ಛ ಗ್ರಾಮಗಳಾಗಿ~ ಅಭಿವೃದ್ದಿಪಡಿಸಲು ಸದಸ್ಯರೆಲ್ಲರೂ ಒಗ್ಗೂಡಿ ಪ್ರಯತ್ನಿಸುವಂತೆ ಕಾಂಗ್ರೆಸ್ ಯುವ ಮುಖಂಡ ಡಿ.ಕೆ.ಸುರೇಶ್ ಸಲಹೆ ನೀಡಿದರು. 

 

ಕಸಬಾ ಹೋಬಳಿ ತುಂಗಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿ.ರಾಂಪುರ ಗ್ರಾಮದ ಕಾಲೋನಿಯಲ್ಲಿ 12 ಲಕ್ಷರೂ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.ರಸ್ತೆಗಾಗಿ ಮಂಜೂರಾಗಿರುವ 12 ಲಕ್ಷ ರೂಗಳನ್ನು ಸಮರ್ಪಕವಾಗಿ ಖರ್ಚು ಮಾಡಿ, ಗುಣಮಟ್ಟದ ರಸ್ತೆ ನಿರ್ಮಾಣ ಮಾಡಬೇಕು. ಗುತ್ತಿಗೆದಾರರು ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಅವರು ತಿಳಿಸಿದರು.ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರವಿ ಮಾತನಾಡಿ, ಪ್ರತಿ ಹಳ್ಳಿಗಳಲ್ಲಿ ಸಮಗ್ರವಾಗಿ ಅಭಿವೃದ್ಧಿಯಾಗಬೇಕು ಎನ್ನುವ ನಿಟ್ಟಿನಲ್ಲಿ ಶಾಸ್ವತ ರಸ್ತೆ, ಕುಡಿಯುವ ನೀರು, ವಿದ್ಯುತ್ ಸೌಲಭ್ಯ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗಿದೆ ಎಂದರು.ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸುಕನ್ಯಾ ರಂಗಸ್ವಾಮಿ ,ಜಿಲ್ಲಾ ಪಂಚಾಯಿತಿ ಸದಸ್ಯ ವೆಂಕಟೇಶಯ್ಯ ತಾಲ್ಲೂಕು ಪಂಚಾಯಿತಿ ಸದಸ್ಯ ಪುರುಷೋತ್ತಮ, ಕಾಂಗ್ರೆಸ್ ಮುಖಂಡರಾದ ತುಂಗಣಿ ದುರ್ಗಯ್ಯ, ರಾಂಪುರ ನಾಗೇಶ್, ಡೈರಿ ಅಧ್ಯಕ್ಷ ನಾಗರಾಜು, ಸಿ.ಜಗದೀಶ್, ವಿಜಯಕುಮಾರ್, ರಾಮಚಂದ್ರು, ಬೋಜರಾಜ್, ಹೊನ್ನಪ್ಪ, ರವಿ ಮತ್ತಿತರರು ಭೂಮಿ ಪೂಜೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.