ಭಾನುವಾರ, ಏಪ್ರಿಲ್ 18, 2021
32 °C

ಸ್ವಚ್ಛ ಪರಿಸರ-ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಸವಕಲ್ಯಾಣ:  ಆರೋಗ್ಯ ಕೇಂದ್ರಗಳಲ್ಲಿ ಉತ್ತಮ ಸೇವೆ ಒದಗಿಸುವ ಜತೆಯಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ದೀಪಿಕಾ ರಾಠೋಡ ಹೇಳಿದರು.ತಾಲ್ಲೂಕಿನ ಕಿಟ್ಟಾ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈಚೆಗೆ ಹಮ್ಮಿಕೊಂಡ ನಿವೃತ್ತ ವೈದ್ಯ ಡಾ.ಸೂರ್ಯಕಾಂತ ರೆಡ್ಡಿ ಅವರ ಬೀಳ್ಕೊಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.ಕ್ಷಯರೋಗ ನಿರ್ಮೂಲನೆಯಲ್ಲಿ ಕಿಟ್ಟಾ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಮಟ್ಟದಲ್ಲಿ ಮೊದಲ ಬಹುಮಾನ ದೊರೆತಿರುವುದು ಸಂತಸದ ವಿಷಯ ಎಂದರು. ಬೇರೆ ಕೇಂದ್ರಗಳಲ್ಲಿಯೂ ಉತ್ತಮ ಚಿಕಿತ್ಸೆ ದೊರೆಯಬೇಕು ಎಂದರು.ಜಿಲ್ಲಾ ಪಂಚಾಯಿತಿ ಸದಸ್ಯ ರವೀಂದ್ರರೆಡ್ಡಿ ಗೋಕುಳ ಮಾತನಾಡಿ ಸೂರ್ಯಕಾಂತರೆಡ್ಡಿ ಅವರು ಕಳೆದ ಅನೇಕ ವರ್ಷಗಳಿಂದ ಇಲ್ಲಿಯೇ ಸೇವೆ ಸಲ್ಲಿಸುತಿದ್ದು ಆಸ್ಪತ್ರೆಯನ್ನು ಸರಿಯಾಗಿ ಇಟ್ಟುಕೊಂಡಿದ್ದಾರೆ ಎಂದರು.ತಾಲ್ಲೂಕು ಆಸ್ಪತ್ರೆ ಮುಖ್ಯ ವೈದ್ಯ ಡಾ.ಜಿ.ಎಸ್.ಭುರಳೆ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲತಾ ಶಾಂತಕುಮಾರ ಹಾರಕೂಡೆ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಗುಂಡುರೆಡ್ಡಿ, ತಾಲ್ಲೂಕು ವೈದ್ಯಾಧಿಕಾರಿ ಶರಣಪ್ಪ ಮುಡಬಿಕರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಅಸಫಾಕ್ ಜಾವೀದ್, ರೈತ ಮುಖಂಡ ಮಾಣಿಕಪ್ಪ ಮೇಟಿಕಾರ್, ಸೂರ್ಯಕಾಂತ ಫುಲೇಕರ್, ರಾಜರೆಡ್ಡಿ ಮಂಠಾಳ, ಭೀಮರೆಡ್ಡಿ, ಜ್ಞಾನರೆಡ್ಡಿ, ರಾಮಲಿಂಗಪ್ಪ ಮುಂತಾದವರು ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.