ಗುರುವಾರ , ನವೆಂಬರ್ 21, 2019
20 °C

ಸ್ವತಂತ್ರ ಅಭ್ಯರ್ಥಿ: ಸಚಿವ ಆನಂದ್‌ಸಿಂಗ್

Published:
Updated:

ಹೊಸಪೇಟೆ (ಬಳ್ಳಾರಿ ಜಿಲ್ಲೆ):  ಕೆಲ ದಿನಗಳಿಂದ ರಾಜಕೀಯವಾಗಿ ತಟಸ್ಥರಾಗಿಯೇ ಉಳಿದಿದ್ದ  ರಾಜ್ಯ ಪ್ರವಾಸೋದ್ಯಮ ಸಚಿವ ಆನಂದ ಸಿಂಗ್ ಇದೇ 9 ರಂದು ಸಚಿವ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.2008ರ ವಿಧಾನಸಭಾ ಚುನಾವಣೆಯಲ್ಲಿ ನೂತನವಾಗಿ ರಚನೆಯಾದ ವಿಜಯನಗರ (ಹೊಸಪೇಟೆ) ವಿಧಾನಸಭಾ ಸಾಮಾನ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆನಂದ ಸಿಂಗ್ ಆಯ್ಕೆಯಾಗಿದ್ದರು. ಜಗದೀಶ ಶೆಟ್ಟರ್ ಸಚಿವ ಸಂಪುಟದಲ್ಲಿ ಪ್ರವಾಸೋದ್ಯಮ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದರು.ಈವರೆಗೂ ಮಾಧ್ಯಮಗಳ ಮುಂದೆ ಕಾಣಿಸಿಕೊಳ್ಳದ  ಸಚಿವ ಆನಂದ ಸಿಂಗ್ ದೂರವಾಣಿ ಮೂಲಕ `ಪ್ರಜಾವಾಣಿ' ಯೊಂದಿಗೆ ಮಾತನಾಡಿ `ಇದೇ 9 ರಂದು ಸಚಿವ, ಶಾಸಕ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವೆ. ಅಲ್ಲದೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವೆ' ಎಂದು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)