ನ್ಯೂಯಾರ್ಕ್ (ಎಎಫ್ಪಿ): ಐಎಂಎಫ್ನ ಮಾಜಿ ಮುಖ್ಯಸ್ಥ ಡೊಮಿನಿಕ್ ಸ್ಟ್ರಾಸ್ ಕಾನ್ ಅವರು ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಿಂದ ಮುಕ್ತರಾದ ಬಳಿಕ ತಮ್ಮ ದೇಶವಾದ ಫ್ರಾನ್ಸ್ಗೆ ಪ್ರಯಾಣ ಬೆಳೆಸಿದ್ದಾರೆ.

ಕಾನ್, ಪತ್ನಿ ಅನ್ನಾ ಸಿಂಕ್ಲೈರ್ ಅವರೊಂದಿಗೆ ಶನಿವಾರ ನ್ಯೂಯಾರ್ಕ್ನ ಜಾನ್ ಎಫ್ ಕೆನಡಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಮಾಧ್ಯಮ ಪ್ರತಿನಿಧಿಗಳ ಹಿಂಡು ಅವರನ್ನು ಸುತ್ತುವರೆಯಿತು. ಬಳಿಕ, ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳು ಅವರನ್ನು ತಪಾಸಣೆ ನಡೆಸಿದ ನಂತರ ಪ್ರಯಾಣಕ್ಕೆ ಅನುಮತಿ ನೀಡಿದರು.

ನ್ಯೂಯಾರ್ಕ್ನಲ್ಲಿ ಮನೆ ಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮತ್ತು ಅತ್ಯಾಚಾರ ನಡೆಸಲು ಯತ್ನಿಸಿದ ಆರೋಪದ ಅಡಿಯಲ್ಲಿ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮೇ ತಿಂಗಳಲ್ಲಿ 62 ವರ್ಷದ ಕಾನ್ ಅವರನ್ನು ಬಂಧಿಸಲಾಗಿತ್ತು. ಆ ನಂತರ ಅವರು ಹಣಕಾಸು ನಿಧಿಯ ವ್ಯವಸ್ಥಾಪಕ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.