ಸ್ವದೇಶಕ್ಕೆ ಮರಳಲು ಮುಷರಫ್ ಸಿದ್ಧತೆ

ಗುರುವಾರ , ಮೇ 23, 2019
32 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಸ್ವದೇಶಕ್ಕೆ ಮರಳಲು ಮುಷರಫ್ ಸಿದ್ಧತೆ

Published:
Updated:

ಲಾಹೋರ್, (ಪಿಟಿಐ): ದೇಶಭ್ರಷ್ಟರಾಗಿ ಬ್ರಿಟನ್ ಮತ್ತು ದುಬೈಯಲ್ಲಿ ವಾಸವಾಗಿರುವ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೆಜ್ ಮುಷರಫ್ ಅವರು ದೇಶಕ್ಕೆ ಮರಳಿದ ನಂತರ ಅಗತ್ಯ ಭದ್ರತಾ ವ್ಯವಸ್ಥೆಗಾಗಿ ಅಮೆರಿಕ ಮತ್ತು ಬ್ರಿಟನ್ ಭದ್ರತಾ ಸಂಸ್ಥೆಗಳನ್ನು ಸಂಪರ್ಕಿಸಿದ್ದಾರೆ.ಮುಂದಿನ ವರ್ಷದ ಆರಂಭದಲ್ಲಿ ಪಾಕಿಸ್ತಾನಕ್ಕೆ ಮರಳುವ ಉದ್ದೇಶ ಹೊಂದಿರುವ ಅವರು ಅಖಿಲ ಪಾಕಿಸ್ತಾನ ಮುಸ್ಲಿಂ ಲೀಗ್ (ಎಪಿಎಂಎಲ್) ಸಭೆಯನ್ನು ಈ ತಿಂಗಳ 18ರಂದು ದುಬೈಯಲ್ಲಿ ಕರೆದಿದ್ದು, ಈ ಸಭೆಗೆ ಪಕ್ಷದ ಪಾಕಿಸ್ತಾನ, ಅಮೆರಿಕ, ಕೆನಡಾ ಮತ್ತು ಬ್ರಿಟನ್‌ನ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಅವರು ಸ್ವದೇಶಕ್ಕೆ ಮರಳುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದು, ಪಕ್ಷದ ಇತರ ವಿಚಾರಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಮುಷರಫ್ ಅವರ ಆಪ್ತರು ತಿಳಿಸಿದ್ದಾರೆ.ಮುಷರಫ್ ಅವರು ಪಾಕಿಸ್ತಾನಕ್ಕೆ ಮರಳಿದ ನಂತರ ಖಾಸಗಿ ಭದ್ರತಾ ಸಂಸ್ಥೆಗಳಲ್ಲದೆ ಪಾಕಿಸ್ತಾನ ಸೇನೆ ಸಹ ಬಿಗಿ ಭದ್ರತೆ ಒದಗಿಸಲಿದೆ ಎಂದು ಎಪಿಎಂಎಲ್ ವಕ್ತಾರರು ತಿಳಿಸಿದ್ದಾರೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry