ಶನಿವಾರ, ಏಪ್ರಿಲ್ 10, 2021
32 °C

ಸ್ವದೇಶಕ್ಕೆ ಹಿಂತಿರುಗುವಂತೆ ಮಾಲಿಂಗಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಲಂಬೊ (ಪಿಟಿಐ): ಸ್ವದೇಶಕ್ಕೆ ಹಿಂತಿರುಗುವಂತೆ ವೇಗಿ ಲಸಿತ್ ಮಾಲಿಂಗ ಅವರಿಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ಸೂಚಿಸಿದೆ.ಮಾಲಿಂಗ ಸದ್ಯ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಆಡುತ್ತಿದ್ದಾರೆ. ಮುಂಬೈ ಇಂಡಿ  ಯನ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಮಂಡಿ ನೋವಿಗೆ ಒಳಗಾಗಿರುವ ಮಾಲಿಂಗ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮುಂಬರುವ ಸರಣಿಯಿಂದ ಹಿಂದೆ ಸರಿದಿದ್ದಾರೆ. ಮಂಡಿ ನೋವಿನ ಕಾರಣ ಸರಣಿಯಲ್ಲಿ ಆಡಲು ಸಾಧ್ಯವಿಲ್ಲ ಎಂದು ಮಾಲಿಂಗ ಲಂಕಾ ಕ್ರಿಕೆಟ್ ಮಂಡಳಿಗೆ ಪತ್ರ ಬರೆದಿದ್ದರು.ಆದರೆ ಮಂಡಿ ನೋವಿದ್ದರೂ ಐಪಿಎಲ್‌ನಲ್ಲಿ ಆಡುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಮಂಡಳಿ ಶೀಘ್ರದಲ್ಲೇ ಸ್ವದೇಶಕ್ಕೆ ವಾಪಸಾಗುವಂತೆ ವೇಗಿಗೆ ಸೂಚಿಸಿದೆ.‘ಅವರು ಮಂಡಿ ನೋವು ಎಂದು ಹೇಳುತ್ತಿದ್ದಾರೆ. ಆದರೆ ಐಪಿಎಲ್‌ನಲ್ಲಿ ಆಡುತ್ತಿದ್ದಾರೆ. ಹಾಗಾಗಿ ಸ್ವದೇಶಕ್ಕೆ ಹಿಂತಿರುಗಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಳ್ಳುವಂತೆ ನಾವು ಮಾಲಿಂಗಗೆ ಸೂಚನೆ ನೀಡಿದ್ದೇವೆ’ ಎಂದು ಲಂಕಾ ತಂಡದ ಆಯ್ಕೆ ಸಮಿತಿಯ ಮುಖ್ಯಸ್ಥ ದುಲೀಪ್ ಮೆಂಡೀಸ್ ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.