ಸ್ವಯಂ ಸೇವಾ ಸಂಸ್ಥೆಗಳು ಗ್ರಾಮೀಣರನ್ನು ತಲುಪಲಿ

7

ಸ್ವಯಂ ಸೇವಾ ಸಂಸ್ಥೆಗಳು ಗ್ರಾಮೀಣರನ್ನು ತಲುಪಲಿ

Published:
Updated:

ಕೃಷ್ಣರಾಜಪುರ: ಗ್ರಾಮೀಣ ಪ್ರದೇಶ ಗಳಲ್ಲಿನ ಬಡವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸ್ವಯಂಸೇವಾ ಸಂಸ್ಥೆಗಳು ತಮ್ಮ ಕಾರ್ಯಚಟು ವಟಿಕೆಗಳನ್ನು ಗ್ರಾಮೀಣ ಪ್ರದೇಶಗಳಿಗೂ ವಿಸ್ತರಿಸಬೇಕು ಎಂದು ನಿವೃತ್ತ ಲೋಕಾಯುಕ್ತ ಎನ್.ವೆಂಕಟಾಚಲ ಸಲಹೆ ನೀಡಿದರು.ಚನ್ನಸಂದ್ರ ವರ್ತುಲ ರಸ್ತೆಯ ಬಳಿ ಎ.ಎಸ್.ಆರ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಎರಡು ದಿನಗಳ ಸ್ವಯಂಸೇವಾ ಸಂಸ್ಥೆಗಳ ಸಮಾವೇಶ ಮತ್ತು ಸದ್ಗುರು ಸೇವಾ ಸಮಿತಿ ವಾರ್ಷಿಕೋತ್ಸವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, `ಸ್ವಯಂಸೇವಾ ಸಂಸ್ಥೆಗಳು ಸರ್ಕಾರದ ಅನುದಾನವನ್ನು ಅವಲಂಬಿಸದೇ ಸ್ವಂತ ಬಲದ ಮೇಲೆ ನಿಲ್ಲಬೇಕು. ಸಮಾಜದಲ್ಲಿ ಇಂದು ಕ್ರಾಂತಿಕಾರಿ ಬದಲಾವಣೆ ಆಗಿಲ್ಲಸಮಾಜ ಪರಿವರ್ತನೆಗಾಗಿ ಸ್ವಯಂಸೇವಾ ಸಂಸ್ಥೆಗಳು ಶ್ರಮಿಸಬೇಕು~ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry