ಬುಧವಾರ, ಜೂಲೈ 8, 2020
28 °C

ಸ್ವಸಹಾಯ ಸಂಘ ಸದಸ್ಯರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಮಹಿಳಾ ಸ್ವಸಹಾಯ ಸಂಘಗಳಿಗೂ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ದೊರಕಿಸಿಕೊಡುವಂತೆ ಒತ್ತಾಯಿಸಿ ಸ್ವಸಹಾಯ ಸಂಘದ ಮಹಿಳೆಯರು ಗುರುವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.ಜೀವನಜ್ಯೋತಿ ಮಹಿಳಾ ಒಕ್ಕೂಟ ನೇತೃತ್ವದಲ್ಲಿ ಸ್ವಸಹಾಯ ಸಂಘದ ಮಹಿಳೆಯರು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.ಸ್ವಸಹಾಯ ಸಂಘದ ಮಹಿಳೆಯರು ಸರ್ಕಾರ ನೀಡುವ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಕೇವಲ ಸ್ತ್ರೀಶಕ್ತಿ ಸಂಘದ ಮಹಿಳೆಯರಿಗೆ ಮಾತ್ರ ಸುತ್ತುನಿಧಿ, ಸಹಾಯಧನ ಸಾಲ ಇತರೆ ಸವಲತ್ತುಗಳ ಸಿಗುತ್ತಿವೆ. ಹಾಸನ  ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿರುವ 825ಕ್ಕೂ ಹೆಚ್ಚು  ಸ್ವಸಹಾಯ ಸಂಘಗಳಿಗೂ ಸೌಲಭ್ಯ ನೀಡುವಂತೆ ಒತ್ತಾಯಿಸಿದರು.ದಿನಬಳಕೆ ವಸ್ತುಗಳ ಬೆಲೆ ಹೆಚ್ಚಳಗೊಂಡಿದ್ದು, ಇವುಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಪಡಿತರ ಚೀಟಿಯಲ್ಲಿ ಉಂಟಾಗುತ್ತಿರುವ ತಾರತಮ್ಯ ಬಗೆಹರಿಸಬೇಕು. ಗ್ರಾಮೀಣ ರಸ್ತೆ, ಬೀದಿದೀಪ ವಿದ್ಯುತ್ ಸಮಸ್ಯೆ ನಿವಾರಣೆಗೆ ಒತ್ತು ನೀಡಬೇಕು. ಜಿಲ್ಲೆಯ ಎಲ್ಲಾ ಗ್ರಾಮಗಳಿಗೂ ಸಮರ್ಪಕ ಸಾರಿಗೆ ವ್ಯವಸ್ಥೆ ಒದಗಿಸುವುದು, ಸರ್ಕಾರಿ ಸೌಲಭ್ಯದ ಮಾಹಿತಿಯನ್ನು ಎಲ್ಲಾ ಸ್ವಸಹಾಯ ಸಂಘಗಳಿಗೂ ನೀಡಬೇಕೆಂದು ಕೋರಿದ್ದಾರೆ.ಜೀವನಜ್ಯೋತಿ ಮಹಿಳಾ ಒಕ್ಕೂಟದ ಮಮತಾ, ಪ್ರಮೀಳ,ರತ್ನ, ಜಯಕರ್ನಾಟಕ ಸಂಘಟನೆ ರಾಜ್ಯ ಉಪಾಧ್ಯಕ್ಷ ಜೆನ್ನಿಕ್ಲಾಸ್ ಡೇವಿಡ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ದಕ್ಷಿಣಾಮೂರ್ತಿ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಡಿ.ಶ್ರೀಕಾಂತ್, ಹೊಯ್ಸಳ ಸಂಘದ ಅಧ್ಯಕ್ಷ  ಸಿ.ಎಸ್. ದಿವಾಕರಗೌಡ ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.