ಸೋಮವಾರ, ಮೇ 17, 2021
21 °C

ಸ್ವಸಹಾಯ ಸಂಘ ಸಾಧನಾ ಸಮಾವೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪ: `ನಮ್ಮ ಏಳಿಗೆಯನ್ನು ನಾವೇ ಸ್ವತಃ ಸಂಕಲ್ಪ ಶಕ್ತಿಯಿಂದ ಸಾಧಿಸಬೇಕು~ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.ಇಲ್ಲಿನ ಪಟ್ಟಣ ಪಂಚಾಯಿತಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ತಾಲ್ಲೂಕುಗಳ 3100 ಪ್ರಗತಿ ಬಂಧು ಸ್ವಸಹಾಯ ಸಂಘಗಳ ಸದಸ್ಯರ ಸಾಧನಾ ಸಮಾವೇಶದಲ್ಲಿ ಅವರು ಮಾತನಾಡಿದರು.ಸಮಾವೇಶ ಉದ್ಘಾಟಿಸಿದ ಸಂಸದ ಜಯಪ್ರಕಾಶ್ ಹೆಗ್ಡೆ ಮಾತನಾಡಿದರು.ಶಾಸಕ ಡಿ.ಎನ್.ಜೀವರಾಜ್ ಸಂಪೂರ್ಣ ಸುರಕ್ಷಾ ಐ.ಡಿ.ಕಾರ್ಡ್ ವಿತರಿಸಿದರು. ಮಾಜಿ ಶಿಕ್ಷಣ ಸಚಿವ ಗೋವಿಂದೆ ಗೌಡ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಚಾಲನೆ ನೀಡಿದರು.ಸ್ವಾಗತ ಸಮಿತಿ ಅಧ್ಯಕ್ಷ ಕೌರಿ ಪ್ರಕಾಶ್, ಜಿ.ಪಂ.ಅಧ್ಯಕ್ಷೆ ಸುಚಿತಾ  ನರೇಂದ್ರ, ತಾ.ಪಂ. ಅಧ್ಯಕ್ಷ ಪದ್ಮಾವತಿ, ಎಚ್.ಟಿ.ರಾಜೇಂದ್ರ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಜಯರಾಮ ನೆಲ್ಲಿತ್ತಾಯ, ಅರವಿಂದ ಸೋಮಯಾಜಿ ಇದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.