ಬುಧವಾರ, ಆಗಸ್ಟ್ 4, 2021
20 °C

ಸ್ವಾಗತ ಕಮಾನು ಬಿದ್ದು ನಟ ಶಿವರಾಜ್‌ಕುಮಾರ್‌ಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸ್ವಾಗತ ಕಮಾನು ಬಿದ್ದು ನಟ ಶಿವರಾಜ್‌ಕುಮಾರ್‌ಗೆ ಗಾಯ

ಬೆಂಗಳೂರು: ಕನ್ನಡ ಚಿತ್ರೋದ್ಯಮದ ಕಲಾವಿದರು ಮತ್ತು ತಂತ್ರಜ್ಞರ ಒಕ್ಕೂಟವು ಗಾಂಧಿನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮಕ್ಕೆ ಮೆರವಣಿಗೆಯಲ್ಲಿ ಬರುತ್ತಿದ್ದ ನಟ ಶಿವರಾಜ್‌ಕುಮಾರ್ ಅವರ ಮೇಲೆ ರಸ್ತೆ ಬದಿಯ ಸ್ವಾಗತ ಕಮಾನು ಬಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ.ಶಿವರಾಜ್‌ಕುಮಾರ್ ಮತ್ತು ಅವರ ಪತ್ನಿ ಗೀತಾ ಅವರನ್ನು ಮೆರವಣಿಗೆ ಮೂಲಕ ಸಮಾರಂಭಕ್ಕೆ ಕರೆತರುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಶಿವರಾಜ್‌ಕುಮಾರ್ ಅವರ ತಲೆಯ ಭಾಗಕ್ಕೆ ಸ್ವಲ್ಪ ಪೆಟ್ಟಾಗಿದೆ.ಶಿವರಾಜ್‌ಕುಮಾರ್ ಅವರು ಚಿತ್ರರಂಗಕ್ಕೆ ಬಂದು 25 ವರ್ಷಗಳಾದ ಹಿನ್ನೆಲೆಯಲ್ಲಿ ಕಲಾವಿದರು ಮತ್ತು ತಂತ್ರಜ್ಞರ ಒಕ್ಕೂಟದ ಕಚೇರಿಯಲ್ಲಿ ಅವರಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.