ಸ್ವಾತಂತ್ರ್ಯೋತ್ಸವದ ಪುಳಕ; ದೇಶಭಕ್ತಿಯಲ್ಲಿ ಜಳಕ..

7

ಸ್ವಾತಂತ್ರ್ಯೋತ್ಸವದ ಪುಳಕ; ದೇಶಭಕ್ತಿಯಲ್ಲಿ ಜಳಕ..

Published:
Updated:
ಸ್ವಾತಂತ್ರ್ಯೋತ್ಸವದ ಪುಳಕ; ದೇಶಭಕ್ತಿಯಲ್ಲಿ ಜಳಕ..

ಮಹದೇವಪುರ: `ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಭ್ರಷ್ಟಾಚಾರ ಹಾಗೂ ಭಯೋತ್ಪಾದನೆ ಹೆಚ್ಚಾಗುತ್ತಿದೆ. ಇದರಿಂದ ಜನತೆಯ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತಿದೆ~ ಎಂದು ಶಾಸಕ ಅರವಿಂದ ಲಿಂಬಾವಳಿ ಸೋಮವಾರ ಇಲ್ಲಿ ಅಭಿಪ್ರಾಯಪಟ್ಟರು.ಕಾಡುಗೋಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, `ಆಂಗ್ಲರಿಗೆ ವಿರುದ್ಧವಾಗಿ ಎದೆಯೊಡ್ಡಿ ಹೋರಾಡಿದ ದೇಶದ ನಾಯಕರನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು. ಅಲ್ಲದೆ, ಅವರೆಲ್ಲರಿಗೂ ಗೌರವ ಸಲ್ಲಿಸಬೇಕಾಗಿರುವುದು ಆದ್ಯ ಕರ್ತವ್ಯವಾಗಿದೆ~ ಎಂದು ಹೇಳಿದರು.`ಆಗಸ್ಟ್ 15ರಂದು ಮಾತ್ರವಷ್ಟೇ ಭಾರತ ಮಾತೆಗೆ ಗೌರವ ಸಮರ್ಪಿಸಿದರೆ ಸಾಲದು~ ಎಂದ ಅವರು, `ಇತ್ತೀಚಿನ ದಿನಗಳಲ್ಲಿ ಯುವ ಮುಂದಾಳುಗಳಲ್ಲಿ ರಾಷ್ಟ್ರಾಭಿಮಾನ ಕಡಿಮೆಯಾಗುತ್ತಿದೆ~ ಎಂದು ವಿಷಾದಿಸಿದರು.ಇದೇ ಸಂದರ್ಭದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ, ಸ್ತಬ್ಧ ಚಿತ್ರಗಳ ಪ್ರದರ್ಶನ ಹಾಗೂ ನೃತ್ಯ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ನಂತರ ಶಾಲಾ ಮಕ್ಕಳಿಗೆ ಸಿಹಿ ಹಂಚಲಾಯಿತು.ಸಾಮೂಹಿಕ ನೃತ್ಯ

ಪೀಣ್ಯ ದಾಸರಹಳ್ಳಿ: ಕ್ಷೇತ್ರದ ಎಲ್ಲ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಸೋಮವಾರ ಸ್ವಾತಂತ್ರ್ಯ ದಿನಾಚರಣೆ ಸಮಾರಂಭವನ್ನು ಸಡಗರ- ಸಂಭ್ರಮದಿಂದ ಆಚರಿಸಲಾಯಿತು.ಬಾಗಲಗುಂಟೆ ಎಂಇಐ ಆಟದ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ನಡೆಸಿಕೊಟ್ಟ ಸಾಮೂಹಿಕ ನೃತ್ಯ ಕಾರ್ಯಕ್ರಮ ಎಲ್ಲರ ಮನರಂಜಿಸಿತು. ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಮೂರು ಸ್ಥಾನ ಪಡೆದ ಟಿ.ದಾಸರಹಳ್ಳಿ, ಬಾಗಲಗುಂಟೆ, ಅಬ್ಬಿಗೆರೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಾದ ಆರ್.ಎನ್.ಶೈಲಾ, ದೇವಿಕಾ, ಸಬೀಹಾ ಬೇಗಂ ಅವರನ್ನು ಸನ್ಮಾನಿಸಲಾಯಿತು.ಇದಕ್ಕೂ ಮುನ್ನ ಧ್ವಜಾರೋಹಣ ನೆರವೇರಿಸಿದ ಶಾಸಕ ಎಸ್.ಮುನಿರಾಜು, ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಬಲಿಕೊಟ್ಟ ಮಹನೀಯರ ಆದರ್ಶ ಗುಣಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು.

ಪಾಲಿಕೆ ಸದಸ್ಯರಾದ ಚಂದ್ರಶೇಖರ್, ಮುನಿಸ್ವಾಮಿ, ಪುಟ್ಟಮ್ಮ ತಮ್ಮಣ್ಣ, ಶಶಿ ಶಿವಕುಮಾರ್, ಉಪ ಆಯುಕ್ತ ಜನ್ನಪ್ಪ ಮತ್ತಿತರರು ಉಪಸ್ಥಿತರಿದ್ದರು.ಭ್ರಷ್ಟಾಚಾರ ನಿಗ್ರಹಕ್ಕೆ ಕರೆ

ಹೊಸಕೋಟೆ:`ಪ್ರತಿಯೊಬ್ಬರೂ ದೇಾಭಿಮಾನ ಬೆಳೆಸಿಕೊಂಡು ದೇಶವನ್ನು ಕಾಡುತ್ತಿರುವ ಭ್ರಷ್ಟಾಚಾರ ಹಾಗೂ ಭಯೋತ್ಪಾದನೆ ನಿಗ್ರಹಿಸಲು ಜಾಗೃತರಾಗುವ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕು~ ಎಂದು ತಹಶೀಲ್ದಾರ್ ಬಿ. ಮಲ್ಲಿಕಾರ್ಜುನ ಕರೆ ನೀಡಿದರು.ತಾಲ್ಲೂಕು ಸ್ವಾತಂತ್ರ್ಯ ದಿನಾಚರಣೆ ಸಮಿತಿ ಆಶ್ರಯದಲ್ಲಿ ಇಲ್ಲಿನ ಚನ್ನಬೆೃರೇಗೌಡ ಕ್ರೆಡಾಂಗಣದಲ್ಲಿ ಸೋಮವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ಎಪಿಎಂಸಿ ಅಧ್ಯಕ್ಷ ಸಿ.ಮುನಿಯಪ್ಪ, ಜಿ.ಪಂ.ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ತಿರುವರಂಗ ನಾರಾಯಣಸ್ವಾಮಿ, ಜಿ.ಪಂ.ಮಾಜಿ ಸದಸ್ಯ ಬಿ.ಎಂ.ನಾರಾಯಣಸ್ವಾಮಿ, ತಾ.ಪಂ. ಅಧ್ಯಕ್ಷ ಟಿ.ಎಸ್.ರಾಜಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಸಿ.ಬಸವರಾಜೇಗೌಡ ಮಾತನಾಡಿದರು. ಪುರಸಭೆ ಅಧ್ಯಕ್ಷ ರಾಜಣ್ಣ ಅಧ್ಯಕ್ಷತೆ ವಹಿಸಿದ್ದರು.

ಶಾಲಾ ಮಕ್ಕಳಿಂದ ಸಾಮೂಹಿಕ ಕವಾಯತು ನಡೆಯಿತು.ಟೌನ್ ಬ್ಯಾಂಕ್: ಪಟ್ಟಣದ ಟೌನ್ ಬ್ಯಾಂಕ್‌ನಲ್ಲಿ ಬ್ಯಾಂಕಿನ ಅಧ್ಯಕ್ಷ ಎಸ್.ಶ್ರೀನಿವಾಸ್ ಧ್ವಜಾರೋಹಣ ನೆರವೇರಿಸಿದರು. ಬ್ಯಾಂಕ್‌ನ ವತಿಯಿಂದ ನಡೆದ ನೇತ್ರ ತಪಾಸಣಾ ಶಿಬಿರದಲ್ಲಿನ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಿಸಲಾಯಿತು. ಉಪಾಧ್ಯಕ್ಷ ರವಿ ಇತರೆ ನಿರ್ದೇಶಕರು ಉಪಸ್ಥಿತರಿದ್ದರು.`ಸ್ವೇಚ್ಛಾಚಾರ ಸ್ವಾತಂತ್ರ್ಯವಲ್ಲ~


  ನೆಲಮಂಗಲ: `ಸ್ವಾತಂತ್ರ್ಯವೆಂದರೆ ಸ್ವೇಚ್ಛಾಚಾರವಲ್ಲ. ಪ್ರತಿಯೊಬ್ಬರೂ ತಮಗೆ ತಾವೇ ಕಡಿವಾಣ ಹಾಕಿಕೊಂಡು ಕ್ರಿಯಾಶೀಲರಾಗಬೇಕು~ ಎಂದು ಎಸ್‌ಡಿಎಂಸಿ ಅಧ್ಯಕ್ಷ ಹನುಮಯ್ಯ ಹೇಳಿದರು.ತಾಲ್ಲೂಕಿನ ಯಂಟಗಾನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಸ್ಥಳೀಯ ಶಾಲಾ ಕಾಲೇಜುಗಳು ಸಂಯುಕ್ತವಾಗಿ ಏರ್ಪಡಿಸಿದ್ದ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, `ಇತಿಹಾಸ ಎಂದರೆ ದೇಶದ ಸ್ವಾತಂತ್ರ್ಯ ಪ್ರಾಪ್ತಿಯ ಇತಿಹಾಸ~ ಎಂದರು.ಇದೇ ಸಂದರ್ಭದಲ್ಲಿ ದ್ವಿತೀಯ ಪಿಯುಸಿಯಲ್ಲಿ ಕಲೆ, ವಿಜ್ಞಾನ, ವಾಣಿಜ್ಯ ವಿಭಾಗಗಳಲ್ಲಿ ಅಧಿಕ ಅಂಕಗಳಿಸಿದ ಸುಮಿತ್ರಾ, ಪ್ರೇಮಾ, ವಸಂತಕುಮಾರ್ ಅವರನ್ನು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಜಿ.ಸಂಪತ್ ಸನ್ಮಾನಿಸಿದರು.ವಿದ್ಯಾರ್ಥಿ ಕಲ್ಯಾಣ ನಿಧಿಯಿಂದ ಪ್ರಥಮ ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ತಾ.ಪಂ. ಮಾಜಿ ಸದಸ್ಯ ಜಯರಾಂ ಗೌರವಿಸಿದರು.ಉತ್ತಮ ವಿದ್ಯಾರ್ಥಿಗಳಿಗೆ ಪ್ರಾಚಾರ್ಯ ಎಚ್.ಬಿ.ಪ್ರಕಾಶ್ ನೀಡಿದ ನಗದು ಬಹುಮಾನವನ್ನು ಗ್ರಾಮ ಪಂಚಾಯಿತಿ ಸದಸ್ಯ ಚಂದ್ರಶೇಖರ್ ವಿತರಿಸಿದರು.ಇತಿಹಾಸ, ವಿಜ್ಞಾನ, ಅರ್ಥಶಾಸ್ತ್ರ ವಿದ್ಯಾರ್ಥಿಗಳು ಸಿದ್ಧಗೊಳಿಸಿದ ಗೋಡೆ ಪತ್ರಿಕೆಗಳನ್ನು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಡಿ.ಶ್ರೀನಿವಾಸಯ್ಯ, ಗ್ರಾ.ಪಂ. ಸದಸ್ಯ ಪ್ರಕಾಶ್, ಎಸ್‌ಡಿಎಂಸಿ ಅಧ್ಯಕ್ಷ ಮುನಿಯಪ್ಪ ಅನಾವರಣಗೊಳಿಸಿದರು. ಹನುಮಣ್ಣ, ಗಂಗಹನುಮಯ್ಯ, ರಾಜಣ್ಣ ವೇದಿಕೆಯಲ್ಲಿದ್ದರು. ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಶಿಕ್ಷಕ ಎಸ್.ಎಸ್.ಬಿರಾದರ್ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಕೆ.ಜಿ.ಭೀಮರಾಜು ವಂದಿಸಿದರು.ಅಂಧರ ಶಾಲೆಯಲ್ಲೂ

ಯಲಹಂಕ: ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಜಕ್ಕೂರಿನಲ್ಲಿರುವ ಶ್ರೀರಾಕುಂ ಅಂಧರ ಶಾಲೆಯಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಸಮಾಜ ಸೇವಕಿ ಮೀನಾಕ್ಷಿ ಶೇಷಾದ್ರಿ ಧ್ವಜಾರೋಹಣ ನೆರವೇರಿಸಿದರು. ಆನಂತರ ಮಾತನಾಡಿದ ಅವರು, `ತ್ಯಾಗ-ಬಲಿದಾನದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ಗಳಿಸಿಕೊಟ್ಟ ಮಹಾನ್ ನಾಯಕರ ಆದರ್ಶಗಳನ್ನು  ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು~ ಎಂದು ಕರೆ ನೀಡಿದರು.ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರವಿಕುಮಾರ್ ಹಾಗೂ `ನಾವು~ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry