ಗುರುವಾರ , ಫೆಬ್ರವರಿ 25, 2021
30 °C

ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಕ್ರೀಡಾಪಟುಗಳನ್ನು ಹುರಿದುಂಬಿಸಿ: ಸಚಿನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಕ್ರೀಡಾಪಟುಗಳನ್ನು ಹುರಿದುಂಬಿಸಿ: ಸಚಿನ್‌

ನವದೆಹಲಿ (ಪಿಟಿಐ): ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿರುವ ಕ್ರೀಡಾಪಟುಗಳು ದೇಶಕ್ಕಾಗಿ ಪದಕ ಗೆದ್ದು ಬರುವಂತೆ ಹುರಿದುಂಬಿಸಬೇಕು ಎಂದು ಕ್ರಿಕೆಟ್‌ ದಿಗ್ಗಜ ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ.ಪದಕ ಗೆಲ್ಲುವಲ್ಲಿ ವಿಫಲವಾಗಿರುವ ಕ್ರೀಡಾಪಟುಗಳು ಮತ್ತು ಪದಕಕ್ಕಾಗಿ ಹೋರಾಡುತ್ತಿರುವ ಕ್ರೀಡಾಪಟುಗಳಿಗೆ ಭಾಷಣದಲ್ಲಿ ಪ್ರೋತ್ಸಾಹದಾಯಕ ಮಾತುಗಳನ್ನಾಡಬೇಕು ಎಂದು ಸಚಿನ್ ಅವರು ‘ನಮೋ’ ಆ್ಯಪ್ ಮೂಲಕ ಮನವಿ ಮಾಡಿದ್ದಾರೆ.‘ನಿಮ್ಮ ಪ್ರೋತ್ಸಾಹದಾಯಕ ಮಾತುಗಳು ಕ್ರೀಡಾಪಟುಗಳ ಮೇಲೆ ಪರಿಣಾಮ ಬೀರಲಿದೆ. ಇದರಿಂದ ಅವರಿಗೆ ಸ್ಫೂರ್ತಿ ಬರುತ್ತದೆ’ ಎಂದು ಅವರು ಹೇಳಿದ್ದಾರೆ.‘ಒಲಿಂಪಿಕ್ಸ್‌ನಲ್ಲಿ ವಿವಿಧ ರಾಜ್ಯಗಳ ಕ್ರೀಡಾಪಟುಗಳು ಭಾಗವಹಿಸಿದ್ದಾರೆ. ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸುವುದೇ ಒಂದು ಸಾಧನೆ. ವಿಶ್ವದ ಅತ್ಯುತ್ತಮ ಕ್ರೀಡಾಪಟುಗಳನ್ನು ಎದುರಿಸಿ ಪದಕದ ಸಾಧನೆ ಮಾಡಬೇಕು’ ಎಂದು ಅವರು ಹೇಳಿದ್ದಾರೆ.ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿರುವ ಕ್ರೀಡಾಪಟುಗಳು ಪದಕ ಸಾಧನೆ ಮಾಡುವ ಮೂಲಕ ಕಿರಿಯ ಕ್ರೀಡಾಪಟುಗಳಿಗೆ ಮಾದರಿಯಾಗಬೇಕು. ಆ ಮೂಲಕ ತಮ್ಮ ಹೆಜ್ಜೆ ಗುರುತುಗಳನ್ನು ಮೂಡಿಸಬೇಕು ಎಂದು ಪ್ರೋತ್ಸಾಹಿಸಿದ್ದಾರೆ.ರಿಯೊ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಂಡಿರುವ ಭಾರತ ತಂಡಕ್ಕೆ ಸಚಿನ್ ತೆಂಡೂಲ್ಕರ್ ರಾಯಭಾರಿಯಾಗಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.