ಮಂಗಳವಾರ, ಮೇ 24, 2022
31 °C

ಸ್ವಾಭಿಮಾನಕ್ಕಾಗಿ ಸ್ವಚ್ಛತಾ ಉತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲೋಕವಳ್ಳಿ(ಮೂಡಿಗೆರೆ): ತಾಲ್ಲೂಕಿನ ಹಳೇ ಮೂಡಿಗೆರೆ ಗ್ರಾ.ಪಂ. ವತಿಯ ಲೋಕವಳ್ಳಿ ಗ್ರಾಮದ ಸಮುದಾಯ ಭವನದಲ್ಲಿ ಸ್ವಾಭಿಮಾನಕ್ಕಾಗಿ ಸ್ವಚ್ಛತಾ ಉತ್ಸವ-2011 ಜಾಥಾವನ್ನು ಇತ್ತೀಚೆಗೆ ಉದ್ಘಾಟಿಸಲಾಯಿತು.ಜಾಥ ನಂತರ ಮಾತನಾಡಿದ ನೊಡಲ್ ಅಧಿಕಾರಿ ಟಿ.ಆರ್.ರುದ್ರಪ್ಪ, ಗ್ರಾ.ಪಂ. ವ್ಯಾಪ್ತಿಯಲ್ಲಿ ಎಲ್ಲಾ ಕುಟುಂಬಗಳು ಶೌಚಾಲಯ ನಿರ್ಮಿಸಿಕೊಂಡು ಸ್ವಚ್ಛತೆ ಕಾಪಾಡಬೇಕು. ಶೌಚಾಲಯ ನಿರ್ಮಿಸಿಕೊಳ್ಳುವವರಿಗೆ ರೂ. 3,700 ಹಾಗೂ ಎಂಎನ್‌ಆರ್‌ಇಜಿಎ ಅಡಿಯಲ್ಲಿ 21 ಮಾನವ ದಿನಗಳ ಕೂಲಿ ಸೌಲಭ್ಯ ಇದ್ದು ಸದುಪಯೋಗ ಪಡೆಯುವಂತೆ ತಿಳಿಸಿದರು.ಲೋಕವಳ್ಳಿ ರಮೇಶ್ ಮಾತನಾಡಿ, ಶೌಚಾಲಯ ನಿರ್ಮಿಸಿ ಸ್ವಚ್ಚತೆ ಕಾಪಾಡಿ ಎಂದು ಮನವಿ ಮಾಡಿದರು.

ಕಾರ್ಯದರ್ಶಿ ಪ್ರಕಾಶ್ ಗ್ರಾ.ಪಂ. ವತಿಯಿಂದ ದೊರೆಯುವ ಸೌಲಭ್ಯಗಳ ಮಾಹಿತಿ ನೀಡಿದರು. ಗ್ರಾ.ಪಂ. ಅಧ್ಯಕ್ಷೆ ಜಾನಕಿ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ.ಉಪಾಧ್ಯಕ್ಷ ಲಕ್ಷ್ಮಣ್, ಸದಸ್ಯರಾದ ಯೊಗೀಶ್, ರವಿ, ಶಕುಂತಲ ಗ್ರಾಮಸ್ಥರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.