ಸೋಮವಾರ, ಜೂನ್ 14, 2021
23 °C

ಸ್ವಾಭಿಮಾನದ ಕೊಡುಗೆ ಕಾಂಗ್ರೆಸ್‌ನದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನರಸಿಂಹರಾಜಪುರ: ರಾಜ್ಯದಲ್ಲಿ ಹೆಚ್ಚು ವರ್ಷ ಆಡಳಿತ ನಡೆಸಿ ಕಾಂಗ್ರೆಸ್ ರಾಜ್ಯಕ್ಕೆ ಸ್ವಾಭಿಮಾನದ ಕೊಡುಗೆ ನೀಡಿದ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಶಾಸಕ ಕೃಷ್ಣಬೈರೇಗೌಡ ತಿಳಿಸಿದರು.ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಉಡುಪಿ- ಲೋಕಸಭಾ ಉಪ ಚುನಾವಣೆ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಪರ ಮತಯಾಚನೆಗೆ  ಸಂದರ್ಭ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

 ಕಾಂಗ್ರೆಸ್ 50 ವರ್ಷಕ್ಕೂ ಅಧಿಕ ಕಾಲ ಆಡಳಿತ ನಡೆಸಿ ಒಳ್ಳೆಯ ಆಡಳಿತ ರೂಪಿಸಿದ ಶ್ರೇಯಸ್ಸು ಸಲ್ಲುತ್ತದೆ.ಬಿಜೆಪಿ ಅಧಿಕಾರಕ್ಕೆ ಬಂದ ನಾಲ್ಕು ವರ್ಷಗಳಲ್ಲಿ ಅದರ ಕೆಲವು ಶಾಸಕರು ಭ್ರಷ್ಟಾಚಾರ, ಅವ್ಯವಹಾರ, ಆಶ್ಲೀಲ ಚಿತ್ರ ನೋಡಿ ರಾಜ್ಯದ ಮಾನ ಹರಾಜಾಕಿದ್ದಾರೆ ಎಂದು ದೂರಿದರು.  ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಆಡಳಿತದಲ್ಲಿ ಮೊದಲನೇ ಸ್ಥಾನದಲ್ಲಿತ್ತು. ಇದನ್ನು ಬಿಜೆಪಿ ಮುಖಂಡ ಮಾಜಿ  ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರೇ ಪ್ರಶಂಸಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಭಷ್ಟಾಚಾರದಲ್ಲಿ ರಾಜ್ಯ ಮೊದಲೇ ಸ್ಥಾನ ಪಡೆಯುವಂತಾಗಿ ಬೇರೆ ರಾಜ್ಯಗಳಲ್ಲಿ ತಲೆ ತಗ್ಗಿಸುವಂತಾಗಿದೆ ಎಂದು ಆರೋಪಿಸಿದರು.ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ 25 ವರ್ಷಗಳಿಂದ ರಾಜಕೀಯದಲ್ಲಿದ್ದು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದಾರೆ. ಇವರನ್ನು ಗೆಲ್ಲಿಸಲು ಪ್ರಾಮಾಣಿಕವಾಗಿ ಎಲ್ಲಾ ಕಾರ್ಯಕರ್ತರು ಪ್ರಯತ್ನಿಸಬೇಕಾಗಿದೆ ಎಂದು ಮನವಿ ಮಾಡಿದರು.ತಾಲ್ಲೂಕು ಕಾಂಗ್ರೆಸ್ ಘಟಕದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಹೋಬಳಿ ಘಟಕದ ಅಧ್ಯಕ್ಷ ಇ.ಸಿ.ಸೇವಿಯಾರ್, ಪ್ರಧಾನ ಕಾರ್ಯದರ್ಶಿ ಅಬುಬಕರ್, ಮುಖಂಡರಾದ ಸೈಯದ್ ಖಲೀಲ್ ಸಾಹೇಬ್, ಪಟ್ಟಣ ಪಂಚಾಯಿತಿ ಸದಸ್ಯ ಅಫ್ರೋಜ್, ಎನ್‌ಎಸ್‌ಯುಐ ಘಟಕದ ತಾಲ್ಲೂಕು ಅಧ್ಯಕ್ಷ ಮಹಮ್ಮದ್ ಸಾದತ್ ಇದ್ದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.