ಶನಿವಾರ, ಮೇ 28, 2022
26 °C

ಸ್ವಾಭಿಮಾನದ ಸಂಕೇತ: ಮರುಳಸಿದ್ದಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಸೋಲು-ಗೆಲುವಿನ ಲೆಕ್ಕಾಚಾರಕ್ಕಿಂತ ರಾಜ್ಯದ ಸ್ವಾಭಿಮಾನದ ಸಂಕೇತವಾಗಿ ನಾನು ನಾಮಪತ್ರ ಸಲ್ಲಿಸಿದ್ದೇನೆ’ ಎಂದು ಸಾಹಿತಿ ಡಾ.ಕೆ.ಮರುಳಸಿದ್ದಪ್ಪ ಸೋಮವಾರ ಇಲ್ಲಿ ತಿಳಿಸಿದರು.ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು ‘ನಾನೊಬ್ಬ ಕನ್ನಡಿಗ. ಹೀಗಾಗಿ ಚುನಾವಣೆಗೆ ಸ್ಪರ್ಧಿಸಿದ್ದು, ಸ್ವಾಭಿಮಾನಿ ಕನ್ನಡಿಗರು ಮತಚಲಾಯಿಸವ ವಿಶ್ವಾಸ ಇದೆ’ ಎಂದು ಹೇಳಿದರು.ಈ ಸಂದರ್ಭದಲ್ಲಿ ಹಾಜರಿದ್ದ ಕಾಂಗ್ರೆಸ್‌ನ ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್ ಮತ್ತು ಜೆಡಿಎಸ್‌ನ ಎಚ್.ಡಿ.ರೇವಣ್ಣ  ಮಾತನಾಡಿ,   ‘ಹೊರಗಿನಿಂದ ಬಂದವರು ರಾಜ್ಯ     ಸಭೆಗೆ ಹೋಗಿ ರಾಜ್ಯಕ್ಕೆ ನ್ಯಾಯ ಒದಗಿಸಲು ಆಗುವುದಿಲ್ಲ. ಹೀಗಾಗಿ ನಾಡಿನ ಸಂಕೇತವಾದ ಹಿರಿಯ ಸಾಹಿತಿಗಳನ್ನು ಕಣಕ್ಕೆ ಇಳಿಸಿದ್ದು, ಗೆಲುವು ಖಚಿತ’ ಎಂದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.