ಶುಕ್ರವಾರ, ಮೇ 7, 2021
20 °C

ಸ್ವಾಭಿಮಾನಿ ಕನ್ನಡಿಗರ ಸಮಾವೇಶ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಂದಗಿ: ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕವು ಪಟ್ಟಣದ ಅಂಜುಮನ್ ಶಾಲೆ ಆವರಣದಲ್ಲಿ ಇದೇ 19ರಂದು ಸ್ವಾಭಿಮಾನಿ ಕನ್ನಡಿಗರ ಜಾಗೃತಿ ಸಮಾವೇಶ ಹಮ್ಮಿಕೊಂಡಿದೆ.



ಹರಿಹರದ ಪಂಚಮಸಾಲಿ ಪೀಠದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಮತ್ತು ಸ್ಥಳೀಯ ಸಾರಂಗಮಠದ ಪ್ರಭು ಸಾರಂಗದೇವ ಶಿವಾಚಾರ್ಯರು ಸಾನ್ನಿಧ್ಯ ವಹಿಸುವರು. ಕರವೇ ರಾಜ್ಯ ಘಟಕದ ಅಧ್ಯಕ್ಷ ಟಿ.ಎನ್. ನಾರಾಯಣಗೌಡ ಸಮಾವೇಶದ ಅಧ್ಯಕ್ಷತೆ ವಹಿಸುವರು.



ಶಾಸಕ ಶ್ರೀರಾಮುಲು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾಜಿ ಶಾಸಕ ರವಿಕಾಂತ ಪಾಟೀಲ ಮೆರವಣಿಗೆ ಉದ್ಘಾಟಿಸುವರು. ಜೆಡಿಯು ರಾಜ್ಯ ಘಟಕದ ಅಧ್ಯಕ್ಷ ಎಂ.ಪಿ. ನಾಡಗೌಡ ಕನ್ನಡಾಂಬೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವರು. ನೈಸ್ ಸಂಸ್ಥೆ ಮುಖ್ಯಸ್ಥ ಅಶೋಕ ಖೇಣಿ ಚಾಲನೆ ನೀಡುವರು. ಶಾಸಕ ರಮೇಶ ಭೂಸನೂರ ಧ್ವಜಾರೋಹಣ ಮಾಡುವರು.



ಮೆರವಣಿಗೆ: ಜಾಗೃತಿ ಸಮಾವೇಶದ ಅಂಗವಾಗಿ ಕನ್ನಡಾಂಬೆ ವೃತ್ತದಿಂದ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ನಾಡದೇವಿಯ ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಕರವೇ ಉತ್ತರ ಕರ್ನಾಟಕ ವಿಭಾಗದ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.