ಸೋಮವಾರ, ಜೂನ್ 14, 2021
21 °C

ಸ್ವಿಟ್ಜರ್ಲೆಂಡ್‌ ಓಪನ್‌: ಸೈನಾಗೆ ಆರನೇ ಶ್ರೇಯಾಂಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಸೆಲ್‌ (ಐಎಎನ್‌ಎಸ್‌): ಸೈನಾ ನೆಹ್ವಾಲ್‌ ಅವರು ಮಂಗಳವಾರ ಇಲ್ಲಿ ಆರಂಭವಾಗಲಿರುವ ಸ್ವಿಟ್ಜರ್ಲೆಂಡ್‌ ಓಪನ್‌ ಗ್ರ್ಯಾನ್‌ ಪ್ರಿ ಗೋಲ್ಡ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಆರನೇ ಶ್ರೇಯಾಂಕ ಪಡೆದಿದ್ದಾರೆ.₨ 77.5 ಲಕ್ಷ ಬಹುಮಾನ ಮೊತ್ತದ ಈ ಟೂರ್ನಿಯಲ್ಲಿ ಸೈನಾ ಹಿಂದೆ ಎರಡು ಬಾರಿ ಚಾಂಪಿಯನ್‌ ಆಗಿದ್ದರು. ಆದರೆ ಅವರು ಇತ್ತೀಚಿನ ದಿನಗಳಲ್ಲಿ ಹೇಳಿಕೊಳ್ಳುವಂಥ ಫಾರ್ಮ್‌ ನಲ್ಲಿಲ್ಲ. ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ ಷಿಪ್‌ನಲ್ಲಿ ಕ್ವಾರ್ಟರ್‌ ಫೈನಲ್‌ನಲ್ಲಿ ಅವರು ಸೋಲು ಕಂಡಿದ್ದಾರೆ.ಈ ಟೂರ್ನಿಯಲ್ಲಿ ಪ್ರಧಾನ ಹಂತದಲ್ಲಿ ಪಾಲ್ಗೊಳ್ಳಲು ಅರ್ಹತೆ ಪಡೆದಿರುವ ಭಾರತದ ಮತ್ತೊಬ್ಬ ಆಟಗಾರ್ತಿ ಸೈಲಿ ರಾಣೆ. ಪುರುಷರ ಸಿಂಗಲ್ಸ್‌ನಲ್ಲಿ ಪಿ.ಕಶ್ಯಪ್‌ ಮೂರನೇ ಶ್ರೇಯಾಂಕ ಪಡೆದಿದ್ದಾರೆ. ಕೆ.ಶ್ರೀಕಾಂತ್‌ ಐದನೇ ಶ್ರೇಯಾಂಕ ಹೊಂದಿದ್ದಾರೆ.

 

ಮಹಿಳೆಯರ ಡಬಲ್ಸ್‌ನಲ್ಲಿ ಅಶ್ವಿನಿ ಪೊನ್ನಪ್ಪ ಹಾಗೂ ಜ್ವಾಲಾ ಗುಟ್ಟಾ ಅವರು ಪ್ರಧಾನ ಹಂತದಲ್ಲಿ ಆಡಲು ನೇರ ಅವಕಾಶ ಪಡೆದಿದ್ದಾರೆ. ಅಶ್ವಿನಿ ಮಿಶ್ರ ಡಬಲ್ಸ್‌ನಲ್ಲಿ ತುರಣ್‌ ಕೋನಾ ಜೊತೆಗೂಡಿ ಆಡಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.