ಬೆಂಗಳೂರು: `ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳ ರಕ್ಷಣೆಗೆ ಮುಂದಾಗಿರುವ ತಮಿಳುನಾಡು ಸರ್ಕಾರ ಹಾಗೂ ಕೆಲ ರಾಜಕೀಯ ಮುಖಂಡರ ಕ್ರಮ ಖಂಡನೀಯ~ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಅಧ್ಯಕ್ಷ ಎಸ್.ಎಸ್.ಪ್ರಕಾಶಂ ಇಲ್ಲಿ ತಿಳಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ರಾಜೀವ್ಗಾಂಧಿ ಅವರ ಹತ್ಯೆಯಾದ 20 ವರ್ಷಗಳ ಬಳಿಕ ನ್ಯಾಯಾಲಯ ನೀಡಿರುವ ತೀರ್ಪು ಮಹತ್ವದಾಗಿದೆ. ಸುಪ್ರೀಂಕೋರ್ಟ್ನ ತೀರ್ಪಿಗೆ ವಿರುದ್ಧವಾಗಿ ಮರಣದಂಡನೆ ನೀಡದಂತೆ ಹೋರಾಡುತ್ತಿರುವ ತಮಿಳುನಾಡು ಸರ್ಕಾರದ ವರ್ತನೆ ಸಂವಿಧಾನ ವಿರೋಧಿಯಾಗಿದೆ. ಇದೆಲ್ಲಾ ಗಮನಿಸಿದರೆ ಉಗ್ರಗಾಮಿಗಳಿಗೆ ತಮಿಳುನಾಡು ಸರ್ಕಾರವೇ ಸಹಕಾರ ನೀಡುತ್ತಿರಬೇಕು~ ಎಂದು ಆರೋಪಿಸಿದರು.

ರಾಷ್ಟ್ರಪತಿ ಅವರು ಸರ್ಕಾರದ ಯಾವುದೇ ಒತ್ತಡಕ್ಕೆ ಮಣಿಯಬಾರದು. ಕೂಡಲೇ ಹಂತಕರಿಗೆ ಗಲ್ಲುಶಿಕ್ಷೆಗೆ ಆದೇಶಿಸಬೇಕು ಎಂದು ಮನವಿ ಮಾಡಿದರು. ಈ ಸಂಬಂಧ ಕೆಪಿಸಿಸಿಯ ಕಾರ್ಮಿಕ ವಿಭಾಗ ಹಾಗೂ ರಾಜೀವ್ಗಾಂಧಿ ಜ್ಯೋತಿ ಸದ್ಬಾಭವನ ಸಮಿತಿಯ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕೇರಳ ರಾಜ್ಯಗಳ ಸಾವಿರಾರು ಸದಸ್ಯರು ದೆಹಲಿಗೆ ತೆರಳಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ಮನವಿ ಸಲ್ಲಿಸಲಾಗುವುದು~ ಎಂದರು.

ರಾಜೀವ್ಗಾಂಧಿ ಹತ್ಯೆಯ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕು. ಮರಣ ದಂಡನೆ ಹಿಂತೆಗೆದುಕೊಳ್ಳಲು ಮುಂದಾದರೆ ದೆಹಲಿಯಲ್ಲಿ ಉಗ್ರ ಪ್ರತಿಭಟನೆ ಮಾಡಲು ಸಮಿತಿ ತೀರ್ಮಾನಿಸಿದೆ ಎಂದು ಅವರು ಹೇಳಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಪ್ರಧಾನ ಕಾರ್ಯದರ್ಶಿ ಮೋಹನ್ ರಾವ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.